ಕಾರು- ಕ್ಯಾಂಟರ್‌ ಡಿಕ್ಕಿ: ತಂದೆ, ಮಗ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ಹಾಸನ: ಜಿಲ್ಲೆಯ ಆಲೂರು ಬಳಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ ತಂದೆ ಮತ್ತು ಮಗ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ತಮಿಳುನಾಡು ಮೂಲದ ಅಂಜನಪ್ಪ (40) ಹಾಗೂ ಮಗ ಕಾರ್ತಿಕ್ (17) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕುಟುಂಬದ 10 ಜನರುಎರಡು ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ಕೂಡಿಗೆ ಬಳಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ತಂದೆ ಮತ್ತು ಮಗ ಸ್ಥಳದಲೇ ಸಾವಿಗೀಡಾಗಿದ್ದಾರೆ.ಮತ್ತೋರ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

ನಿಮ್ಮ ಕಾಮೆಂಟ್ ಬರೆಯಿರಿ

advertisement