ರಾಜ್ಯದ ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ: ಗೌರವಧನ ಹೆಚ್ಚಿಸಿ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರ ಗೌರವ ಸಂಬಳ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಕುರಿತು ಆದೇಶ ಮಾಡಿದೆ.
ಅತಿಥಿ ಶಿಕ್ಷಕರಿಗೆ ಗೌರವಧನವನ್ನು 7,500 ರೂಪಾಯಿಯಿಂದ 10 ಸಾವಿರ ರೂಪಾಯಿಗೆ ಏರಿಕೆ ಮಾಡಿ ಆದೇಶ ಹೊರಡಿಸಿರುವ ಸರ್ಕಾರ ಮತ್ತೊಂದೆಡೆ 5,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಕುರಿತು ಆದೇಶ ಮಾಡಿದೆ.
ಎರಡನೇ ಹಂತದಲ್ಲಿ ನಾಲ್ಕು ಸಾವಿರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಹಾಗೂ ಒಂದು ಸಾವಿರ ಪ್ರೌಢಶಾಲಾ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ 7,500 ರೂ. ಇದ್ದ ಗೌರವಧನವನ್ನು 10,000 ರೂ. ಗಳಿಗೆ ಹೆಚ್ಚಿಸಲಾಗಿದೆ. ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಗೌರವ ಧನವನ್ನು 8,000 ರೂ.ಗಳಿಂದ 10,500 ರೂ. ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement