ಉಕ್ರೇನ್‌ನಲ್ಲಿ ಮೃತಪಟ್ಟಿದ್ದ ನವೀನ್ ಗ್ಯಾನ ಗೌಡರ್ ಕುಟುಂಬದವರನ್ನು ಭೇಟಿಯಾದ ಪ್ರಧಾನಿ ಮೋದಿ

ಬೆಂಗಳೂರು : ಕೊಮ್ಮಘಟ್ಟದಲ್ಲಿ ನಡೆದ ಸಮಾವೇಶದ ವೇದಿಕೆಯ ಹಿಂಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.
ನವೀನ್ ಅವರ ತಂದೆ ಶೇಖರ ಗೌಡ, ತಾಯಿ, ಸಹೋದರ ಅವರನ್ನು ಪ್ರಧಾನಿ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವೇಳೆ ಹಾಜರಿದ್ದರು.

ಉಕ್ರೇನ್‌ನ ಖಾರ್ಕಿವ್ ನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ , ಮಾರ್ಚ್ 1 ರಂದು ಬೆಳಗ್ಗೆ ತಿಂಡಿ ತರಲೆಂದು ಹೊರಗೆ ಬಂದಿದ್ದ ವೇಳೆ ರಷ್ಯಾ ಪಡೆಗಳ ಶೆಲ್ ದಾಳಿಗೆ ಸಿಲುಕಿ ಮೃತಪಟ್ಟಿದ್ದ. 20 ದಿನಗಳ ಬಳಿಕ ಕೇಂದ್ರ ಸರ್ಕಾರ ಯುದ್ಧ ಪೀಡಿತ ಭೂಮಿಯಿಂದ ನವೀನ್‌ ಮೃತದೇಹವನ್ನು ತಾಯ್ಡಾಡಿಗೆ ತರುವಲ್ಲಿ ಯಶಸ್ವಿಯಾಗಿತ್ತು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement