ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬಗ್ಗೆ ವರದಿಯಾಗಿದೆ.
ಮೃತರನ್ನು ಚಿಕ್ಕನಾಯಕನಹಳ್ಳಿಯ ಗಿರೀಶ್ (32) ಹಾಗೂ ಮಾನ್ಯ (17) ಎಂದು ಗುರುತಿಸಲಾಗಿದೆ. ತುಮಕೂರು ಕಡೆಯಿಂದ ತೆರಳಿದ್ದ ಬಸ್, ತಿಪಟೂರು ಕಡೆಯಿಂದ ಬರುತ್ತಿದ್ದ ಕಾರ್ ಮುಖಾಮುಖಿ ಢಿಕ್ಕಿಯಾಗಿ, ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಗುಬ್ಬಿ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/advertisement
ನಿಮ್ಮ ಕಾಮೆಂಟ್ ಬರೆಯಿರಿ