ಬೆಂಗಳೂರು ಐಐಎಸ್‌ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬ್ರೇನ್​ ರಿಸರ್ಚ್ ಸೆಂಟರ್​ ಉದ್ಘಾಟಿದರು. ಅಲ್ಲದೆ
ಬಾಗ್ಚಿ ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು.

ಮೆದುಳು ಸಂಶೋಧನಾ ಕೇಂದ್ರ ದೇಶದ ಅತಿದೊಡ್ಡ ಸಂಶೋಧನಾ ಕೇಂದ್ರವಾಗಿದ್ದು, ವಯಸ್ಸಿಗೆ ಸಂಬಂಧಿಸಿ ಮೆದುಳಿನ ಅಸ್ವಸ್ಥತೆಗಳು, ಅದಕ್ಕೆ ಕಾರಣ ಮತ್ತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆಯಲಿವೆ. ಅಲ್ಲದೆ, ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣ ಅವರು ನೀಡಿರುವ ₹425 ಕೋಟಿ ದೇಣಿಗೆಯಲ್ಲಿ ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುವುದು.

833 ಹಾಸಿಗೆಗಳ ಈ ಆಸ್ಪತ್ರೆಯಲ್ಲಿ ವಿಜ್ಞಾನ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಲಯಕ್ಕೆ ಸಂಬಂಧಿಸಿದ ಸಂಶೋಧನೆ ಗಳು ನಡೆಯಲಿವೆ. ಕ್ಲಿನಿಕಲ್ ಸಂಶೋಧನೆಗೆ ವೇದಿಕೆಯಾಗಲಿದೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​ಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬಸ್ಥರು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement