ಹಿಜಾಬ್ ನಿಷೇಧ: ಮಂಗಳೂರು ವಿವಿ ಕಾಲೇಜಿನಿಂದ ಟಿಸಿ ಪಡೆಯಲು 5 ಮುಸ್ಲಿಂ ಹುಡುಗಿಯರ ಅರ್ಜಿ

ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣ ಪತ್ರ ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.
ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿತ್ತು, ಇದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು..
ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ ಎಸ್ ಯಡಪಡಿತ್ತಾಯ ಅವರು, ಆಯಾ ಸಂಸ್ಥೆಗಳು ನಿಗದಿಪಡಿಸಿದ ಡ್ರೆಸ್ ಕೋಡ್‌ಗೆ ಬದ್ಧರಾಗಿರಲು ವಿದ್ಯಾರ್ಥಿಗಳನ್ನು ಕೇಳುವ ಹೈಕೋರ್ಟ್ ನಿರ್ದೇಶನವನ್ನು ಅನುಸರಿಸಲು ಇಚ್ಛಿಸದಿದ್ದಲ್ಲಿ ಮುಸ್ಲಿಂ ಹುಡುಗಿಯರು ಬೇರೆ ಕಾಲೇಜುಗಳಿಗೆ ಸೇರಲು ವಿಶ್ವವಿದ್ಯಾಲಯವು ವಿಶೇಷ ವ್ಯವಸ್ಥೆ ಮಾಡಲಿದೆ ಎಂದು ಹೇಳಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕಾಲೇಜು ಪ್ರಿನ್ಸಿಪಾಲ್ ಅನಸೂಯಾ ರೈ ಮಾತನಾಡಿ, ಐವರು ವಿದ್ಯಾರ್ಥಿಗಳು ಟಿಸಿಗಾಗಿ ಮನವಿಯೊಂದಿಗೆ ತಮ್ಮ ಬಳಿಗೆ ಬಂದಿದ್ದಾರೆ. ಅರ್ಜಿಗಳು ಅಪೂರ್ಣವಾಗಿ ಕಂಡುಬಂದಿದ್ದರಿಂದ, ತಿದ್ದುಪಡಿಗಳೊಂದಿಗೆ ಹೊಸ ಪತ್ರವನ್ನು ನೀಡಲು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು ಎಂದು ರೈ ಹೇಳಿದ್ದಾರೆ ಎಂದು ನ್ಯೂ ಇಂಡಿಯನ್‌.ಕಾಮ್‌ ವರದಿ ಮಾಡಿದೆ.
ಕೆಲವು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಯುಜಿ ಕೋರ್ಸ್‌ಗಳಿಗೆ ಓದುತ್ತಿರುವ ಎಲ್ಲಾ 44 ಮುಸ್ಲಿಂ ಹುಡುಗಿಯರು ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನಸಭೆ ಚುನಾವಣೆ 2023 : ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement