ಅನಾರೋಗ್ಯ ಪೀಡಿತ ಮಗುವಿನ ತಾಯಿ ಮನವಿಗೆ ಸ್ಪಂದಿಸಿದ ಸಿಎಂ ಬೊಮ್ಮಾಯಿ, 2 ತಾಸಿನಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಳಿ ಬಂದ ಮಹಿಳೆಯೊಬ್ಬರ ಸಮಸ್ಯೆಯನ್ನು ಕ್ಷಣದಲ್ಲಿ ಬಗೆಹರಿಸಿ, ಅಗತ್ಯ ನೆರವು ಸಿಗುವಂತೆ ಮಾಡಿದ್ದಾರೆ.
ಯೋಗ ದಿನಾಚರಣೆ ನಿಮಿತ್ತ ಮೋದಿ ಅವರೊಂದಿಗಿನ ಕಾರ್ಯಕ್ರಮ ಮುಗಿಸಿ ಆರ್‌ಟಿ ನಗರದ ಮನೆಗೆ ಮರಳಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಎಂಬ ಮಹಿಳೆ ತಮ್ಮ ಸಮಸ್ಯೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಗಮನಕ್ಕೆ ಬಂದಿದ್ದಾರೆ. ಕೂಡಲೇ ಅವರನ್ನು ಕರೆದು ಸಮಸ್ಯೆ ಬಗ್ಗೆ ಕೇಳಿದಾಗ, ತಮ್ಮ ಮಗುವಿನ ಅನಾರೋಗ್ಯದ ಬಗ್ಗೆ ಮಹಿಳೆ ಮಾಹಿತಿ ನೀಡಿದ್ದಾರೆ.

ಕೃಷ್ಣವೇಣಿ ಹೆಸರಿನ ಮಗು ದೃಷ್ಟಿ ದೋಷ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗಲಿದೆ. ಆ ಮಗುವಿನ ಚಿಕಿತ್ಸೆಗೆ ನೆರವು ನೀಡುವಂತೆ ಮುಖ್ಯಮಂತ್ರಿ ಬಳಿ ತಾಯಿ ಶಂಕ್ರಮ್ಮ ಮನವಿ ಮಾಡಿದ್ದಾರೆ.
ತಕ್ಷಣವೇ ಸ್ಪಂದಿಸಿದ ಬೊಮ್ಮಾಯಿ, ಕೂಡಲೇ ಮಗುವಿಗೆ ಉಚಿತವಾಗಿ ಎಲ್ಲಾ ಚಿಕಿತ್ಸೆ ನೀಡುವಂತೆ ಸೂಚಿಸಿ, ವ್ಯವಸ್ಥೆ ಮಾಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯಿಂದ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ಪತ್ರ ಬರೆದು ರವಾನಿಸಿ, ಕೃಷ್ಣವೇಣಿಯ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಿಂದ ಕೃಷ್ಣವೇಣಿಗೆ ಉಚಿತ ಚಿಕಿತ್ಸೆ ನೀಡುವ ಬಗ್ಗೆ ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ ಪಿ.ಎ ಗೋಪಾಲ್‌ ಅಧಿಕೃತ ಪತ್ರ ನೀಡಿದ್ದಾರೆ. ಚಿಕಿತ್ಸೆ ಬಳಿಕ ಸೂಕ್ತ ಬಿಲ್‌ ಪಾವತಿಸುವಂತೆ ಪತ್ರದಲ್ಲಿ ನಮೂದಿಸಿದ್ದಾರೆ. ಅಲ್ಲದೆ, ಮಗುವಿಗೆ ಸಂಪೂರ್ಣವಾದ ಚಿಕಿತ್ಸೆ ನೀಡಿದ ನಂತರ ಸರ್ಕಾರಕ್ಕೆ ಬಿಲ್ ಗಳನ್ನು ಸಲ್ಲಿಸುವಂತೆ ಪತ್ರದಲ್ಲಿ ಎಸ್ ಡಿ ಎಂ ಆಸ್ಪತ್ರೆಗೆ ಸೂಚಿಸಲಾಗಿದೆ. ಮುಖ್ಯಮಂತ್ರಿಗಳ ಸ್ಪಂದನೆಗೆ ಮಹಿಳೆ ಸಂತಸ ವ್ಯಕ್ತಪಡಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement