ಕನ್ನಡದ ಖ್ಯಾತ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು: ಗೋವಾದಿಂದ ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್

posted in: ರಾಜ್ಯ | 0

ಕನ್ನಡದ ಖ್ಯಾತ ದಿಗಂತ್ ಅವರ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರನ್ನು ಏರ್‌ಲಿಫ್ಟ್‌ ಮೂಲಕ ಬೆಂಗಳೂರಿಗೆ ಕರತರಲಾಗುವುದು ಎಂದು ಮೂಲಗಳು ತಿಳಿಸಿವೆ.
ಗೋವಾದಲ್ಲಿ ಸೊಮರ್‌ಸಾಲ್ಟ್ (Somersault) ಮಾಡುವ ವೇಳೆ ಕುತ್ತಿಗೆಗೆ ನಟ ದಿಗಂತ್ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಈ ಬಗ್ಗೆ ಬಲ್ಲ ಮೂಲಗಳು ತಿಳಿಸಿವೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಸದ್ಯ ದಿಗಂತ್‌ ಅವರಿಗೆ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಅವರನ್ನು ಏರ್ ಲಿಫ್ಟ್‌ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಕುಟುಂಬಸ್ಥರು ಕರೆತರಲಿದ್ದಾರೆ. ದಿಗಂತ್ ಅವರೊಂದಿಗೆ ನಟಿ/ಪತ್ನಿ ಆಂದ್ರಿತಾ ರೇ ಕೂಡ ಇದ್ದಾರೆ ಎನ್ನಲಾಗಿದೆ.
ತಮ್ಮ ಕುಟುಂಬದ ಜೊತೆಗೆ ನಟ ದಿಗಂತ್ ಪ್ರವಾಸಕ್ಕೆಂದು ಗೋವಾಕ್ಕೆ ತೆರಳಿದ್ದರು. ಗೋವಾದ ಸಮುದ್ರ ತೀರದಲ್ಲಿ ಸೊಮರ್‌ಶಾಟ್‌ ಮಾಡಲು ದಿಗಂತ್ ಮುಂದಾದಾಗ ಅವರ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಗೋವಾದ ಬೀಚ್‌ನಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಆಯತಪ್ಪಿ ತಲೆ ಕೆಳಗಾಗಿ ಬಿದ್ದ ಪರಿಣಾಮ ದಿಗಂತ್ ಕುತ್ತಿಗೆಗೆ ತೀವ್ರ ಪೆಟ್ಟಾಗಿದೆ ಎನ್ನಲಾಗುತ್ತಿದೆ.
ದಿಗಂತ್ ಅವರನ್ನು ಕೂಡಲೆ ಅವರನ್ನು ಗೋವಾದಲ್ಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ದಿಗಂತ್ ಅವರನ್ನು ಬೆಂಗಳೂರಿಗೆ ಕರೆತರುವ ಪ್ರಯತ್ನ ನಡೆಯುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್‌ ಲಿಫ್ಟ್ ಮೂಲಕ ದಿಗಂತ್ ಅವರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತರಲಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಿಗಂತ್ ಅವರಿಗೆ ಚಿಕಿತ್ಸೆ ನೀಡುವ ಕುರಿತು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

advertisement

ನಿಮ್ಮ ಕಾಮೆಂಟ್ ಬರೆಯಿರಿ