ಬೆಳಗಾವಿ: ಗುಂಡು ಹೊಡೆದು ಬೆಳ್ಳಂಬೆಳಿಗ್ಗೆ ಕೊಲೆ ಆರೋಪಿ ಬಂಧಿಸಿದ ಪೊಲೀಸರು

posted in: ರಾಜ್ಯ | 0

ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಕಾಲಿಗೆ, ಮಂಗಳವಾರ ನಸುಕಿನಲ್ಲಿ ಪೊಲೀಸರು ಗುಂಡು ಹೊಡೆದು ಬಂಧಿಸಲಾಗಿದೆ.
ರಾಜು ದೊಡ್ಡಬೊಮ್ಮನವರ ಎಂಬ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆಯ ಆರೋಪ ಹೊತ್ತಿರುವ ವಿಶಾಲ ಸಿಂಗ್ ಚವ್ಹಾಣ ಎಂಬ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಅನೇಕ ದಿಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬೆಳಗಾವಿ ವೀರಭದ್ರ ನಗರದ ಮನೆಯೊಂದರಲ್ಲಿ ಸೋಮವಾರ ರಾತ್ರಿ ಬಂದು ಅವಿತು ಕೊಂಡಿದ್ದ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಮಂಗಳವಾರ ಬೆಳಿಗಿನ ಜಾವ 5ರ ಸುಮಾರಿಗೆ ಪೊಲೀಸರು ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸಿಪಿ ನಾರಾಯಣ ಭರಮನಿ ಹೊಡೆದ ಗುಂಡು ಆರೋಪಿ ಕಾಲಿಗೆ ತಗುಲಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶಾಲಸಿಂಗ್ ಬಹಳ ಹಿಂದೆ ರೌಡಿಶೀಟರ್ ಆಗಿದ್ದ. ಕಳೆದ ತಿಂಗಳು ರಾಯಲ್ ಎಸ್ಟೇಟ್ ಉದ್ಯಮಿ ರಾಜು ಅವರನ್ನು ಸುಪಾರಿ ಪಡೆದು ಕೊಲೆ ಮಾಡಿದ ಆರೋಪ ಹೊತ್ತಿದ್ದನೆ. ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ. ಮಾರ್ಚ್‌ 15ರಂದು ಬೆಳಗಾವಿಯ ಭವಾನಿ ನಗರದಲ್ಲಿ ಬೆಳಗ್ಗೆ ಕಾರಿನಲ್ಲಿ ಹೊರಟಿದ್ದ ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನವರ (40) ಅವರನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು, ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ, ಇರಿದು, ಕೊಲೆ ಮಾಡಿ ಪರಾರಿಯಾಗಿದ್ದರು.
ರಾಜು ಮೂರು ವಿವಾಹವಾಗಿದ್ದರು.‌ ಅವರ ಕೊಲೆಗೆ ಎರಡನೇ ಪತ್ನಿ ₹ 10 ಲಕ್ಷ ಸುಫಾರಿ ನೀಡಿದ್ದರು ಎಂದು ಆರೋಪಿಸಲಾಗಿದೆ.

ಓದಿರಿ :-   ಕುಮಟಾ: ಮೂರು ದಿನಗಳ ಕಾರ್ಯಾಚರಣೆ ನಂತರ ಸಮುದ್ರ ಪಾಲಾದ ಮತ್ತಿಬ್ಬರ ಶವ ಪತ್ತೆ

 

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ