ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಂಗಾಧರ ಕೊಳಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಉಪಾಧ್ಯಕ್ಷರಾಗಿ ಯಶವಂತ ನಾಯ್ಕ ತ್ಯಾರ್ಸಿ, ಕಾರ್ಯದರ್ಶಿಯಾಗಿ ರಮೇಶ ಹೆಗಡೆ ಹಾರ್ಸಿಮನೆ ಹಾಗೂ ಖಜಾಂಚಿಯಾಗಿ ಶ್ರೀಧರ ಜಿ.ಹೆಗಡೆ ಮದ್ದಿನಕೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ನಿಕಟಪೂರ್ವ ಅಧ್ಯಕ್ಷ ಗಣೇಶ ಭಟ್ಟ ಹೊಸೂರು,ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ನಾಗರಾಜ ಭಟ್ಟ ಕೆಕ್ಕಾರ, ಜಿಲ್ಲಾ ಸಂಘದ ಸದಸ್ಯ ಶಿವಶಂಕರ ಕೋಲಸಿರ್ಸಿ, ತಾಲೂಕು ಸಂಘದ ಸದಸ್ಯ ಸುರೇಶ ಕಡಕೇರಿ ಉಪಸ್ಥಿತರಿದ್ದರು.
ಸಿದ್ದಾಪುರ ಹೊಸೂರಿನ ಸಂಕಲ್ಪ ಸೇವಾ ಟ್ರಸ್ಟ್ನ ಅಧ್ಯಕ್ಷ ಪಿ.ಬಿ.ಹೊಸೂರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ