ಇಂದಿನಿಂದ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕು: ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಹವಾಮಾನ ಇಲಾಖೆಯಿಂದ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.
ಇಂದಿನಿಂದ ಜೂನ್ 24ರ ವರೆಗೆ ರಾಜ್ಯಾದ್ಯಂತ ನಿರಂತರ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ,ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 24ರ ವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇಂದಿನಿಂದ 4 ದಿನ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ 4 ದಿನಗಳ ಕಾಲ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಲಕ್ಷಣಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 4 ದಿನ ‘ಹಳದಿ ಅಲರ್ಟ್’ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

 

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement