ಶರದ್ ಪವಾರ್ ವಿರುದ್ಧ ಟ್ವೀಟ್: ಎರಡು ಎಫ್ಐಆರ್‌ಗಳಲ್ಲಿ ನಿಖಿಲ್ ಭಾಮ್ರೆಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು

ಮುಂಬೈ: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿ ಬಂಧನದಲ್ಲಿರುವ 21 ವರ್ಷದ ವಿದ್ಯಾರ್ಥಿ ನಿಖಿಲ್ ಭಾಮ್ರೆಗೆ ಎರಡು ಎಫ್‌ಐಆರ್‌ಗಳಲ್ಲಿ ಬಾಂಬೆ ಹೈಕೋರ್ಟ್‌ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ.

ಒಂದು ತಿಂಗಳಿಗಿಂತಲೂ ಹೆಚ್ಚು ಕಾಲ ವಿದ್ಯಾರ್ಥಿ ಜೈಲಿನಲ್ಲಿದ್ದಾನೆ. ಇನ್ನು ಇದಕ್ಕೆ ಅನುಮತಿಸಲಾಗದು. ಪ್ರಕರಣ ಸಾರ್ವಜನಿಕ ಹಿತಾಸಕ್ತಿಯ ಕೆಲ ಅಂಶಗಳನ್ನು ಒಳಗೊಂಡಿದೆ ಎಂದು ನ್ಯಾಯಮೂರ್ತಿಗಳಾದ ನಿತಿನ್ ಜಾಮದಾರ್‌ ಮತ್ತು ಎನ್‌ ಆರ್ ಬೋರ್ಕರ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು. ಮಹಾರಾಷ್ಟ್ರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಿಸಲಾಗಿದ್ದ ಆರು ಎಫ್ಐಆರ್‌ಗಳನ್ನು ಆಧರಿಸಿ ಭಾಮ್ರೆಯನ್ನು ಬಂಧಿಸಲಾಗಿತ್ತು. ಮೂರು ವಾರಗಳ ನಂತರ ಪ್ರಕರಣದ ಅಂತಿಮ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸರಿಯಾಗಿ ಅಡುಗೆ ಮಾಡಲಿಲ್ಲ ಎಂಬ ಕಾರಣಕ್ಕೆ ಅಜ್ಜಿಗೆ ಬರ್ಬರವಾಗಿ ಥಳಿಸಿದ ಮೊಮ್ಮಗ-ಆತನ ಪತ್ನಿ : ವೀಡಿಯೊ ವೈರಲ್‌, ಇಬ್ಬರ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement