ನವದೆಹಲಿ: ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪೊಲೀಸ್ ಅಧಿಕಾರಿಗಳತ್ತ ಉಗುಳಿರುವ ಘಟನೆ ನಡೆದಿದೆ.
ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಾಹನ ಹತ್ತಿಸುವ ವೇಳೆ ವಾಹನ ಏರಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಬಳಿಕ ಪೊಲೀಸರತ್ತ ಉಗುಳಿದ್ದಾರೆ. ಈ ವೀಡಿಯೊವನ್ನು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ರಾಹುಲ್ ಗಾಂಧಿಯವರನ್ನು ವಿಚಾರಿಸಿದ್ದಕ್ಕೆ ಅಸ್ಸಾಂನಲ್ಲಿ ಪೊಲೀಸರ ಮೇಲೆ ಹಲ್ಲೆಯಾಯಿತು. ಹೈದರಾಬಾದ್‌ನಲ್ಲಿ ಕಾಲರ್ ಹಿಡಿದಿದ್ದಾರೆ. ಈಗ ದೆಹಲಿಯಲ್ಲಿ ಪೊಲೀಸರತ್ತ ಉಗಿಯುವ ಮೂಲಕ ಅಸಹ್ಯ ಕೆಲಸ ಮಾಡಿದ್ದಾರೆ. ಇದರ ವಿರುದ್ದ ಕಾಂಗ್ರೆಸ್‌ನ ಸೋನಿಯಾ, ರಾಹುಲ್, ಪ್ರಿಯಾಂಕಾ ಅವರು ಕ್ರಮ ಕೈಗೊಳ್ಳುತ್ತರೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಕರೆದಿರುವುದನ್ನು ವಿರೋಧಿಸಿ ಮೆರವಣಿಗೆ ನಡೆಸುತ್ತಿರುವಾಗ ಜನರನ್ನು ಗುಂಪುಗೂಡದಂತೆ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ 18 ಸಂಸದರು ಸೇರಿದಂತೆ 197 ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿ ಕೇವಲ 1,000 ಪಕ್ಷದ ಕಾರ್ಯಕರ್ತರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂಬ ಷರತ್ತಿಗೆ ಒಳಪಟ್ಟು ‘ಧರಣಿ’ಗೆ ಅನುಮತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವಾಗ, ಪ್ರತಿಭಟನಾಕಾರರಲ್ಲಿ ಒಬ್ಬರಾದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅಡ್ಡಿಪಡಿಸಿದರು ಮತ್ತು ಅವರ ಮೇಲೆ ಉಗುಳಿದರು, ಈ ವಿರುದ್ಧ ಕಾನೂನಿನ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ