ಇಡಿ ಮುಂದೆ ಹಾಜರಾಗಲು ಹೆಚ್ಚಿನ ಸಮಯ ಕೋರಿದ ಸೋನಿಯಾ ಗಾಂಧಿ

ನವದೆಹಲಿ: ಕೋವಿಡ್ -19 ಮತ್ತು ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಕೆಲವು ವಾರಗಳ ಕಾಲ ತಮ್ಮ ವಿಚಾರಣೆಯನ್ನು ಮುಂದೂಡಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಪತ್ರ ಬರೆದಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನ ಕಾರಣ ಆಸ್ಪತ್ರೆಗೆ ದಾಖಲಾದ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯಲು ಕಟ್ಟುನಿಟ್ಟಾಗಿ ಸಲಹೆ ನೀಡಲಾಗಿರುವುದರಿಂದ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು, ಬುಧವಾರ ಇಡಿಗೆ ಪತ್ರ ಬರೆದಿದ್ದಾರೆ, ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಕೆಲವು ವಾರಗಳ ಕಾಲ ವಿಚಾರಣೆಗೆ ಹಾಜರಾಗುವುದನ್ನು ಮುಂದೂಡಬೇಕು” ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. .

ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಅಧ್ಯಕ್ಷರು ಸೋಮವಾರ ಡಿಸ್ಚಾರ್ಜ್ ಆಗಿದ್ದಾರೆ. ನ್ಯಾಷನಲ್ ಹೆರಾಲ್ಡ್ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಐದು ದಿನಗಳಲ್ಲಿ 50 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ ಇಡಿ ಸೋನಿಯಾ ಗಾಂಧಿ ಅವರಿಗೂ ಜೂನ್‌ ೨೩ರಂದು ಹಾಜರಾಗುವಂತೆ ಸಮನ್ಸ್‌ ನೀಡಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಸಂಜಯ್ ರಾವತ್‌ಗೆ ಹಾಜರಾಗಲು ಜುಲೈ 1ಕ್ಕೆ ಹೊಸ ಸಮನ್ಸ್ ನೀಡಿದ ಇಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ