ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ : 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಕಾರವಾರ : ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೆಚ್ಚಿನ ಉಬ್ಬರವಿಳಿತದಿಂದಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಕರಾವಳಿ ಜಿಲ್ಲೆಗಳಿಗೆ ಬುಧವಾರ ರೆಡ್ ಅಲರ್ಟ್ ಮತ್ತು ಮುಂದಿನ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆ ಜೋರಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಹಾಗೂ 18 ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಮಳೆಯಿಂದಾಗಿ ಕಾರವಾರದ ಹೈ ಚರ್ಚ್ ರಸ್ತೆ, ನಂದನಗದ್ದೆ ಮತ್ತು ರೈಲ್ವೆ ಸ್ಟೇಷನ್ ರಸ್ತೆ ಸೇರಿದಂತೆ ಹಲವಾರು ವಸತಿ ಪ್ರದೇಶಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ. ರವೀಂದ್ರನಾಥ ಠಾಗೋರ್ ಕಡಲತೀರದ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66 ಮತ್ತು ಹಬ್ಬುವಾಡದ ರಾಜ್ಯ ಹೆದ್ದಾರಿಯು ಮಳೆ ನೀರಿನಿಂದ ಜಲಾವೃತಗೊಂಡು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಉತ್ತರ ಕನ್ನಡದ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲಿ ದಿನವಿಡೀ ಮಳೆ ಮತ್ತು ಜೋರಾದ ಗಾಳಿ ಬೀಸಿದೆ. ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಜೂನ್ 25 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement