ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ನಂತರ ದೇವಸ್ಥಾನದ ಕಸ ಗುಡಿಸಿದ ದ್ರೌಪದಿ ಮುರ್ಮು | ವೀಕ್ಷಿಸಿ

ಭುವನೇಶ್ವರ : ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಇಂದು, ಬುಧವಾರ ತನ್ನ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‌ಪುರದಲ್ಲಿರುವ ಶಿವ ದೇವಾಲಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ದೇವಾಲಯದ ಪ್ರಾಂಗಣದ ಕಸ ಗುಡಿಸುತ್ತಿರು ದೃಶ್ಯ ಕ್ಯಾಮಾರಾದಲ್ಲಿ ಸೆರೆಯಾಗಿದೆ. ದ್ರೌಪದಿ ಮುರ್ಮು ಅವರು ‘ಜಾಹಿರಾ’ ಎಂಬ ಬುಡಕಟ್ಟು ಆರಾಧನಾ ಸ್ಥಳಕ್ಕೂ ಭೇಟಿ ನೀಡಿದ್ದಾರೆ.

ಒಡಿಶಾದ ಬುಡಕಟ್ಟು ನಾಯಕಿ ಹಾಗೂ ಮಾಜಿ ರಾಜ್ಯಪಾಲರಾದ ಮುರ್ಮು ಅವರನ್ನು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಅವರು ಜೂನ್ 25 ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮುರ್ಮು ಅವರು ತಮ್ಮ ಹೆಸರು ಘೋಷಣೆ ಮಾಡಿದ ಬಗ್ಗೆ ಪ್ರತಿಕ್ರಿಯಿಸಿ ಈ ಬಗ್ಗೆ ತಿಳಿದು ಆಶ್ಚರ್ಯವಾಯಿತು ಮತ್ತು ಅದನ್ನು ನಂಬಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಬಿಜೆಪಿಯ ಸಂಸದೀಯ ಮಂಡಳಿಯ ಸಭೆಯ ನಂತರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ತಮ್ಮ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದ್ದರು. 64 ವರ್ಷದ ಮುರ್ಮು ಅವರು ಆಯ್ಕೆಯಾದರೆ, ಭಾರತದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ ಮೊದಲ ಬುಡಕಟ್ಟು ಜನಾಂಗದ ವ್ಯಕ್ತಿ ಎಂಬ ಹೆಗ್ಗಳಿಕೆ ಪಾತ್ರರಾಗುತ್ತಾರೆ.
ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement