ಮನಸ್ಸು ಮಾಡಿದರೆ ನಾನು ಒಂದು ದಿನವಾದರೂ ಮುಖ್ಯಮಂತ್ರಿ ಆಗಬಲ್ಲೆ : ಜನಾರ್ದನ ರೆಡ್ಡಿ

posted in: ರಾಜ್ಯ | 0

ಬಳ್ಳಾರಿ: ನನಗೆ ಶಾಸಕ, ಮಂತ್ರಿಯಾಗಬೇಕೆಂಬ ಆಸೆಯಿಲ್ಲ. ಮನಸ್ಸು ಮಾಡಿದರೆ ಒಂದು ದಿನವಾದರೂ ಮುಖ್ಯಮಂತ್ರಿಯಾಗಬಲ್ಲೆ ಎಂದು ಮಾಜಿ ಸಚಿವ ಬಿ. ಜನಾರ್ದನ ರೆಡ್ಡಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಂಗಳವಾರ ನಡೆದ ಶಾಸಕ ಸೋಮಶೇಖರ್ ರೆಡ್ಡಿ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೆಡ್ಡಿ ಮತ್ತು ರಾಮುಲು ಸಹೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗಂತೂ ಶಾಸಕ, ಮಂತ್ರಿಯಾಗುವ ಆಸೆ, ಆಕಾಂಕ್ಷೆಗಳಿಲ್ಲ. ಮನಸ್ಸು ಮಾಡಿದರೆ ಮುಖ್ಯಮಂತ್ರಿಯೇ ಆಗುವ ತಾಕತ್ತು ನನಗಿದೆ ಎಂದು ಹೇಳಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಕರುಣಾಕರ ರೆಡ್ಡಿಯವರು ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಬಳ್ಳಾರಿ ನಗರಸಭೆ ಅಧ್ಯಕ್ಷರಾಗಿದ್ದ ಸೋಮಶೇಖರ್‌ ರೆಡ್ಡಿ ಶಾಸಕರಾಗುವ ತನಕ ಬೆಳೆದಿದ್ದಾರೆ. ನಾನು ರಾಜಕೀಯದಲ್ಲಿ ಬೆಳೆಯಲು ಹಲವು ರೀತಿಯ ಕಷ್ಟಗಳನ್ನು ಎದುರಿಸಿದ್ದೇನೆ. ಆದರೆ ಬಳ್ಳಾರಿ ಕನಕದುರ್ಗಮ್ಮ ದೇವಿಯ ಆಶೀರ್ವಾದದಿಂದ ಆ ಕಷ್ಟವನ್ನೆಲ್ಲ ಮೆಟ್ಟಿನಿಂತು ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ ಎಂದರು.

 

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ಓದಿರಿ :-   ಪಠ್ಯದಲ್ಲಿ ಕನಕದಾಸರ ಜೀವನ ಚರಿತ್ರೆ ಈ ಹಿಂದಿನಂತೆಯೇ ಪ್ರಕಟಿಸಲು ಸಿಎಂ ಬೊಮ್ಮಾಯಿ ಸೂಚನೆ
advertisement

ನಿಮ್ಮ ಕಾಮೆಂಟ್ ಬರೆಯಿರಿ