ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ಜೂನ್‌ 30ರ ವರೆಗೆ ವಿಸ್ತರಣೆ

ಬೆಂಗಳೂರು: 2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್‌ 30ರ ವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, 2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು, ಪ್ರಾಂಶುಪಾಲರು https://nationalawardstoteachers.education.gov.in/login.aspx ಅಂತರ್ಜಾಲ ತಾಣಕ್ಕೆ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ www.schooleducation.kar.nic.in ತಾಣಕ್ಕೆ ಭೇಟಿ ನೀಡಿ ತಾವೇ ಸ್ವತಃ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜೂನ್‌ 20ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಅವಧಿಯನ್ನು‌ ಜೂನ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement