ವಸತಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಗ್ನಿಪಥ ಯೋಜನೆಯಡಿ ನಾಲ್ಕು ವರ್ಷಗಳ ಸೇವಾ ತರಬೇತಿ ಮುಗಿಸಿ ಹೊರಬರುವ ಅಗ್ನಿವೀರರಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಶೇ 75ರಷ್ಟು ಮೀಸಲಾತಿ ನೀಡುವ ಯೋಚನೆ ಇದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಅಗ್ನಿಪಥ ಯೋಜನೆಗೆ ಸಹಕಾರ ನೀಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ದೈಹಿಕ ಶಿಕ್ಷಣ ಶಿಕ್ಷಕರಾಗಲು ಅರ್ಹತೆ ಹೊಂದಿರುವ ಅಗ್ನಿವೀರರನ್ನು ಮೀಸಲಾತಿ ಹಾಗೂ ರೋಸ್ಟರ್ ನಿಯಮದಡಿ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಪರಿಶೀಲನೆಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಟಿಪ್ಪಣಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಸಲಹೆಗಳ ಕುರಿತು ಸರ್ಕಾರ ಚರ್ಚಿಸಲಿದೆ. ಸಾಹಿತಿಗಳ ಆಕ್ಷೇಪಗಳು ಹಾಗೂ ಸಲಹೆಗಳನ್ನು ಪರಿಗಣಿಸಿ ಅವರಿಗೆ ಮನವರಿಕೆ ಮಾಡಿಕೊಡಲಿದೆ ಎಂದು ಸಚಿವ ಕೋಟ ತಿಳಿಸಿದರು.

ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement