ವೃತ್ತಿಪರ ಕೋರ್ಸ್‌ಗಳ ಪ್ರವೇಶ: ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ

posted in: ರಾಜ್ಯ | 0

ಬೆಂಗಳೂರು: ಇಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಈ ವರ್ಷ ಶೇಕಡಾ 10ರಷ್ಟು ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ.
ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಜೊತೆ ಇಂದು, ಬುಧವಾರ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದ್ದಾರೆ.
ಎರಡು ವರ್ಷಗಳಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಈ ವರ್ಷ 25%ರಷ್ಟು ಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಬೇಡಿಕೆ ಇಟ್ಟಿದ್ದವು. ಆದರೆ, ಶುಲ್ಕ ನಿಗದಿ ಸಮಿತಿಯು ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಸಭೆಯಲ್ಲಿ ಶಿಫಾರಸಿನಂತೆ ತೀರ್ಮಾನ ಕೈಗೊಳ್ಳಲಾಯಿತು ಎಂದು ತಿಳಿಸಿದರು.
45% ಲೋಯರ್ ಫೀಸ್, 30% ಹೈಯರ್ ಫೀಸ್, 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ. ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಶುಲ್ಕ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸರಳಗೊಳಿಸುವ ಬಗ್ಗೆ ಚರ್ಚೆ ನಡೆದಿದೆ ಎಂದರು.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/
ಓದಿರಿ :-   ಕುಮಟಾ: ಮೂರು ದಿನಗಳ ಕಾರ್ಯಾಚರಣೆ ನಂತರ ಸಮುದ್ರ ಪಾಲಾದ ಮತ್ತಿಬ್ಬರ ಶವ ಪತ್ತೆ

ಒಂದೇ ಸಿಇಟಿಗೆ ಸಹಮತ
ಮುಂದಿನ ವರ್ಷದಿಂದ ಒಂದೇ ಸಿಇಟಿ ನಡೆಸಲು ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸಹಮತ ವ್ಯಕ್ತಪಡಿಸಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಈಗ ವೃತ್ತಿಪರ ಶಿಕ್ಷಣ ಕೋರ್ಸ್ ಪ್ರವೇಶಕ್ಕೆ ರಾಜ್ಯ ಸರ್ಕಾರ ಮತ್ತು ಕಾಮೆಡ್-ಕೆ ಪ್ರತ್ಯೇಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸುತ್ತಿವೆ. ಮುಂದಿನ ವರ್ಷದಿಂದ ಒಂದೇ ಸಿಇಟಿ ನಡೆಸಲು ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸಹಮತ ವ್ಯಕ್ತಪಡಿಸಿದೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಎಂದು ಚರ್ಚೆ ಮಾಡಿದ್ದೇವೆ.ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.
ವೃತ್ತಿಪರ ವ್ಯಾಸಂಗಗಳ ಪ್ರವೇಶಕ್ಕೆ ಮುಂದಿನ ವರ್ಷದಿಂದ ಕಾಮೆಡ್-ಕೆ ಇರುವುದಿಲ್ಲ. ಸಿಇಟಿಯಲ್ಲಿ ಕಾಮೆಡ್-ಕೆ ವಿಲೀನಗೊಳಿಸಿ ಒಂದೇ ಪರೀಕ್ಷೆ ನಡೆಸಲು ಅನುದಾನರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಸಂಘ (ಕುಪೆಕಾ) ಸಹಮತ ವ್ಯಕ್ತಪಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಕರ್ನಾಟಕದಲ್ಲಿ 1 ಲಕ್ಷ ಎಲೆಕ್ಟ್ರಿಕ್ ವಾಹನಗಳ ನೋಂದಣಿ: ಸಚಿವ ಮುರುಗೇಶ್ ನಿರಾಣಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ