೫೦ ರೂ.ಗಳಿಗೆ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಸ್ನೇಹಿತರ ನಡುವೆ ಕೇವಲ ೫೦ ರೂ.ಗಳಿಗೆ ನಡೆದ ಜಗಳವು ಯುವಕನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಸವೇಶ್ವರನಗರದ ಕುರುಬರಹಳ್ಳಿ ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದ ವರದಿಯಾಗಿದೆ.
ಲಗ್ಗೆರೆಯ ಶಿವಮಾಧು(೨೪) ಎಂಬಾತ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ . ಸ್ನೇಹಿತ ಶಾಂತಕುಮಾರ ಎಂಬಾತ ಈ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ ಎಂದು ಡಿಸಿಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಕೊಲೆಯಾದ ಶಿವಮಾಧು ಮತ್ತು ಆರೋಪಿ ಶಾಂತಕುಮಾರ ಇಬ್ಬರೂ ಚಿಕ್ಕಂದಿನಿಂದಲೂ ಸ್ನೇಹಿತರು. ಕುರುಬರಹಳ್ಳಿ ಸರ್ಕಲ್ ಬಳಿಯಿಂದ ಕೆಲ ವರ್ಷಗಳ ಹಿಂದೆ ಲಗ್ಗೆರೆ ಬ್ರಿಡ್ಜ್ ಸಮೀಪ ಸ್ಥಳಾಂತರವಾಗಿದ್ದರು. ಆರೋಪಿ ಜೊಮ್ಯಾಟೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಮೃತ ಶಿವಮಾಧು ಆಟೋ ಚಾಲಕನಾಗಿದ್ದ. ನಿನ್ನೆ ಕುರುಬರಹಳ್ಳಿ ಸರ್ಕಲ್ ಕಡೆ ಬಂದಿದ್ದ ಶಿವಮಾಧು, ಶಾಂತಕುಮಾಯ ಮತ್ತು ಸ್ನೇಹಿತರು ಹತ್ತಿರದ ಮೈದಾನವೊಂದರಲ್ಲಿ ಕ್ರಿಕೆಟ್ ಆಡಲು ಹೋಗಿದ್ದಾರೆ.

ಕ್ರಿಕೆಟ್ ಆಡಿ ಬಂದವರೇ ಏನೋ ಕೆಲಸಕ್ಕೆಂದು ರಾತ್ರಿ ೮.೩೦ರ ಸುಮಾರಿಗೆ ಸರ್ಕಲ್ ಬಳಿಯಿರುವ ಸೈಬರ್ ಸೆಂಟರ್‌ಗೆ ಹೋಗಿದ್ದರು.
ಈ ವೇಳೆ ಶಾಂತಕುಮಾರ್ ಜೇಬಿನಿಂದ ಶಿವಮಾಧು ೫೦ ರೂ ತೆಗೆದುಕೊಂಡಿದ್ದಾನೆ. ಈ ಕಾರಣಕ್ಕೆ ಇಬ್ಬರ ಮಧ್ಯೆ ಜಗಳವಾಗಿದ್ದು, ಕೋಪಗೊಂಡ ಆರೋಪಿ ಶಾಂತಕುಮಾರ ಸ್ನೇಹಿತ ಶಿವಮಾಧು ಎದೆಗೆ ಚುಚ್ಚಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಿದ್ದಿದ್ದ ಶಿವಮಾಧುನನ್ನು ಸ್ನೇಹಿತರು ಸ್ಥಳೀಯ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement