ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ ರಾಜ್ಯಪಾಲ ಕೋಶ್ಯಾರಿಗೆ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಇಂದು, ಬುಧವಾರ (ಜೂನ್ 22) ಕೋವಿಡ್-19 ಸೋಂಕು ದೃಢಪಟ್ಟಿದೆ ಹಾಗೂ ಅವರನ್ನು ಮುಂಬೈನ HN ರಿಲಯನ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ತನಗೆ ಸೌಮ್ಯ ಲಕ್ಷಣಗಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಮಹಾರಾಷ್ಟ್ರವು ಪ್ರಸ್ತುತ ರಾಜಕೀಯ ಪ್ರಕ್ಷುಬ್ಧತೆಗೆ ಸಾಕ್ಷಿಯಾಗಿದೆ. ಶಿವಸೇನಾ ನಾಯಕ ಏಕನಾಥ್ ಶಿಂಧೆ ಅವರು ಮಂಗಳವಾರ ಇತರ ಹಲವಾರು ಶಾಸಕರೊಂದಿಗೆ ಅಜ್ಞಾತವಾಸಕ್ಕೆ ತೆರಳಿದರು ಮತ್ತು ಪಕ್ಷದ ವಿರುದ್ಧ ಬಂಡಾಯವೆದ್ದು ಪ್ರಮುಖ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಶಿಂಧೆ ಅವರು ಇತರ ಶಾಸಕರೊಂದಿಗೆ ಇಂದು ಬೆಳಗ್ಗೆ ಅಸ್ಸಾಂನ ಗುವಾಹತಿ ತಲುಪಿದ್ದಾರೆ.

ತಮಗೆ 40 ಶಾಸಕರ ಬೆಂಬಲವಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಶಿಂಧೆ ಪಾಳಯವು ತನ್ನೊಳಗಿನ ಬೆಳವಣಿಗೆಗಳ ಬಗ್ಗೆ ಬಾಯಿ ಬಿಟ್ಟಿದ್ದರೂ, ಶಿಂಧೆ ಅವರು, “ನಾವು ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆಯನ್ನು ಬಿಟ್ಟಿಲ್ಲ. ನಾವು ಅದನ್ನು ಬಿಡುವುದಿಲ್ಲ. ನಾವು ಬಾಳಾಸಾಹೇಬರ ಹಿಂದುತ್ವವನ್ನು ಅನುಸರಿಸುತ್ತಿದ್ದೇವೆ ಮತ್ತು ಅದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಎಂವಿಎ ಮೈತ್ರಿಕೂಟವು ಶಾಸಕರನ್ನು ಮರಳಿ ಕರೆತರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು ಈ ‘ಬಂಡಾಯ’ ಶಾಸಕರ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದೆ.

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement