ಸ್ತ್ರೀ ಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆಗೆ ಅಕ್ಟೋಬರ್‌ 2ರಂದು ಚಾಲನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಅಕ್ಟೋಬರ್ 2ರಂದು ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು, ಬುಧವಾರ ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ … Continued

೫೦ ರೂ.ಗಳಿಗೆ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಸ್ನೇಹಿತರ ನಡುವೆ ಕೇವಲ ೫೦ ರೂ.ಗಳಿಗೆ ನಡೆದ ಜಗಳವು ಯುವಕನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಸವೇಶ್ವರನಗರದ ಕುರುಬರಹಳ್ಳಿ ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದ ವರದಿಯಾಗಿದೆ. ಲಗ್ಗೆರೆಯ ಶಿವಮಾಧು(೨೪) ಎಂಬಾತ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ . ಸ್ನೇಹಿತ ಶಾಂತಕುಮಾರ ಎಂಬಾತ ಈ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ ಎಂದು ಡಿಸಿಪಿ ಡಾ. ಸಂಜೀವ್ ಪಾಟೀಲ್ … Continued

ಇಡಿ ಮುಂದೆ ಹಾಜರಾಗಲು ಹೆಚ್ಚಿನ ಸಮಯ ಕೋರಿದ ಸೋನಿಯಾ ಗಾಂಧಿ

ನವದೆಹಲಿ: ಕೋವಿಡ್ -19 ಮತ್ತು ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಕೆಲವು ವಾರಗಳ ಕಾಲ ತಮ್ಮ ವಿಚಾರಣೆಯನ್ನು ಮುಂದೂಡಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಪತ್ರ ಬರೆದಿದ್ದಾರೆ. ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನ ಕಾರಣ ಆಸ್ಪತ್ರೆಗೆ ದಾಖಲಾದ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯಲು ಕಟ್ಟುನಿಟ್ಟಾಗಿ ಸಲಹೆ ನೀಡಲಾಗಿರುವುದರಿಂದ, ಕಾಂಗ್ರೆಸ್ ಅಧ್ಯಕ್ಷೆ … Continued

ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟು ಮತ್ತಷ್ಟು ಉಲ್ಬಣ: 34 ಶಾಸಕರಿಂದ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬೆಂಬಲಿಸಿ ರಾಜ್ಯಪಾಲರಿಗೆ ಪತ್ರ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಿಕ್ಕಟ್ಟು ಇಂದು ಮತ್ತಷ್ಟು ಉಲ್ಬಣಗೊಂಡಿದ್ದು, 34 ಶಾಸಕರು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಗುವಾಹತಿಯಲ್ಲಿರುವ ಶಾಸಕರು, ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ವಜಾಗೊಳಿಸಿದ ಒಂದು ದಿನದ ನಂತರ, ಏಕನಾಥ್ ಶಿಂಧೆ ಅವರು ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ … Continued

ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ: 1,000ಕ್ಕೂ ಹೆಚ್ಚು ಜನರ ಸಾವು, 1500 ಮಂದಿಗೆ ಗಾಯ

ಕಾಬೂಲ್‌ :ಬುಧವಾರ ಮುಂಜಾನೆ ಪೂರ್ವ ಅಫ್ಘಾನಿಸ್ತಾನದ ಗ್ರಾಮೀಣ, ಪರ್ವತ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 1,000 ಜನರು ಸಾವಿಗೀಡಾಗಿದ್ದಾರೆ ಮತ್ತು 1,500 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಸುದ್ದಿ ಸಂಸ್ಥೆಯೊಂದು ತಿಳಿಸಿದೆ. ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.1 ತೀವ್ರತೆಯ ಕಂಪನವು ಖೋಸ್ಟ್ ಮತ್ತು ಪಕ್ಟಿಕಾ ಪ್ರಾಂತ್ಯಗಳಲ್ಲಿ ಕಟ್ಟಡಗಳನ್ನು ಹಾನಿಗೊಳಿಸಿತು. … Continued

ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ : 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಕಾರವಾರ : ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚಿನ ಉಬ್ಬರವಿಳಿತದಿಂದಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಕರಾವಳಿ ಜಿಲ್ಲೆಗಳಿಗೆ ಬುಧವಾರ ರೆಡ್ … Continued

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಕೊರೊನಾ ಸೋಂಕು: ವೀಡಿಯೊ ಕಾನ್ಫರೆನ್ಸ್‌ ಮೂಲಕ ಕ್ಯಾಬಿನೆಟ್ ಸಭೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಮಲ್ ನಾಥ್ ಬುಧವಾರ ಹೇಳಿದ್ದಾರೆ. ರಾಜ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಈ ಕಾರಣದಿಂದ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. “ನಾವು ಉದ್ಧವ್ ಠಾಕ್ರೆ ಅವರೊಂದಿಗೆ ಸಭೆ ನಡೆಸಿದ್ದೇವೆ ಆದರೆ ಅವರು ಕೋವಿಡ್‌ಗೆ ಧನಾತ್ಮಕ … Continued

ಅಫ್ಘಾನಿಸ್ತಾನದಲ್ಲಿ ಭೂಕಂಪ : 280 ಜನರು ಸಾವು, ನೂರಾರು ಮನೆಗಳ ಕುಸಿತ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಬುಧವಾರ ಮುಂಜಾನೆ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 280 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ನೂರಾರು ಜನರು ಗಾಯಗೊಂಡಿದ್ದಾರೆ ಮತ್ತು ದೂರದ ಪರ್ವತ ಹಳ್ಳಿಗಳಿಂದ ಮಾಹಿತಿ ಸಿಕ್ಕಿದ ನಂತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಗಡಿಯ ಸಮೀಪವಿರುವ ಖೋಸ್ಟ್ ನಗರದಿಂದ ಸುಮಾರು 44 ಕಿಮೀ … Continued

ಸಣ್ಣ ಕಾವಲಿಯಿಂದ ಮೊಸಳೆಗೆ ಬಡಿದು ಓಡಿಸಿದ ಪಬ್ ಮಾಲೀಕ | ವೀಕ್ಷಿಸಿ

ಆಸ್ಟ್ರೇಲಿಯಾದ ಪಬ್ ಮಾಲೀಕರೊಬ್ಬರು ಫ್ರೈಯಿಂಗ್ ಪ್ಯಾನ್‌ನೊಂದಿಗೆ ಕೋಪಗೊಂಡ ಮೊಸಳೆಯೊಂದಿಗೆ ಹೋರಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಟೋರಿಫುಲ್ ಒದಗಿಸಿದ ವೀಡಿಯೊವು ಪಬ್ ಮಾಲೀಕ ಕೇ ಹ್ಯಾನ್ಸೆನ್ ಮೊಸಳೆಯೊಂದಿಗೆ ಮುಖಾಮುಖಿಯಾಗಿದ್ದಾರೆ. ಸರೀಸೃಪವು ಹ್ಯಾನ್ಸೆನ್ ಕಡೆಗೆ ಬಾಯಿ ತೆರೆದುಕೊಂಡು ಧಾವಿಸಿದೆ. ಆ ಸಮಯದಲ್ಲಿ ಹಾನ್ಸೆನ್‌ ಮೊಸಳೆಯ ತಲೆಯ ಮೇಲೆ ಎರಡು ಬಾರಿ ಹೊಡೆಯಲು ಬಾಣಲೆಯನ್ನು ಬಳಸುತ್ತಾರೆ. ಎರಡನೇ ಹೊಡೆತದ ನಂತರ, ಮೊಸಳೆಯು … Continued

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ ರಾಜ್ಯಪಾಲ ಕೋಶ್ಯಾರಿಗೆ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಇಂದು, ಬುಧವಾರ (ಜೂನ್ 22) ಕೋವಿಡ್-19 ಸೋಂಕು ದೃಢಪಟ್ಟಿದೆ ಹಾಗೂ ಅವರನ್ನು ಮುಂಬೈನ HN ರಿಲಯನ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ತನಗೆ ಸೌಮ್ಯ ಲಕ್ಷಣಗಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಮಹಾರಾಷ್ಟ್ರವು ಪ್ರಸ್ತುತ ರಾಜಕೀಯ ಪ್ರಕ್ಷುಬ್ಧತೆಗೆ ಸಾಕ್ಷಿಯಾಗಿದೆ. ಶಿವಸೇನಾ ನಾಯಕ ಏಕನಾಥ್ ಶಿಂಧೆ … Continued