ಇಂದು ದೆಹಲಿಗೆ ಸಿಎಂ ಬೊಮ್ಮಾಯಿ, ವರಿಷ್ಠರ ಜತೆ ಚರ್ಚೆ

posted in: ರಾಜ್ಯ | 0

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಗುರುವಾರ ನವದೆಹಲಿಗೆ ತೆರಳಲಿದ್ದು ವರಿಷ್ಠರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ದಿಢೀರ್ ದೆಹಲಿ ಭೇಟಿ ಸಹಜವಾಗಿಯೇ ಕುತೂಹಲಕ್ಕೆ ಕಾರಣವಾಗಿದೆ.
ಸಂಪುಟ ವಿಸ್ತರಣೆ ಕುರಿತು ಹಲವು ದಿನಗಳಿಂದ ಚರ್ಚೆಗಳು ನಡೆಯುತ್ತಿವೆ. ಚುನಾವಣೆ ಕೂಡಾ ಹತ್ತಿರವಾಗುತ್ತಿರುವುದರಿಂದ ಆಕಾಂಕ್ಷಿಗಳ ಒತ್ತಡವೂ ಹೆಚ್ಚಾಗುತ್ತಿದೆ. ಹೀಗಾಗಿ ಬೊಮ್ಮಾಯಿಯವರ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಗುರುವಾರ ಮಧ್ಯಾಹ್ನ 1:30 ಕ್ಕೆ ದೆಹಲಿಗೆ ತೆರಳಲಿದ್ದು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಅಲ್ಲದೆ, ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಆರು ವಾರದೊಳಗಾಗಿ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಶುರುಮಾಡುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಅಲ್ಲದೆ, ಪಂಚಮಸಾಲಿ ಮೀಸಲಾತಿ ಬೇಡಿಕೆಯ ಕುರಿತಾಗಿಯೂ ಬೊಮ್ಮಾಯಿ ಅವರು ವರಿಷ್ಠರ ಜೊತೆಗೆ ಚರ್ಚೆ ನಡೆಸಬಹುದು ಎನ್ನಲಾಗುತ್ತಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ನಿಮ್ಮ ಕಾಮೆಂಟ್ ಬರೆಯಿರಿ