ಗಂಟಲಲ್ಲಿ ಕೃಷ್ಣ….! ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಗಂಟಲಲ್ಲಿ ಸಿಲುಕಿದ್ದ ಕೃಷ್ಣನ ವಿಗ್ರಹ  ಹೊರತೆಗೆದ ಕೆಎಲ್ಇ ವೈದ್ಯರು

ಬೆಳಗಾವಿ: ಇದೇನಿದು ಕಂಠದಲ್ಲಿ ಕೃಷ್ಣ ಎಂದು ಆಶ್ಚರ್ಯವಾಗುತ್ತದೆ ಅಲ್ಲವೆ..? ನಿಜ, ಕಂಠದಿಂದ ಕೃಷ್ಣನನ್ನು ಶಸ್ತ್ರ ಚಿಕಿತ್ಸೆ ಮೂಲಕ ತೆಗೆದ ವಿದ್ಯಮಾನ ನಗರದ ಆಸ್ಪತ್ರೆಯಲ್ಲಿ ನಡೆದಿದೆ.
45 ವರ್ಷದ ವ್ಯಕ್ತಿಯೊಬ್ಬ ದೇವರ ತೀರ್ಥ ಸೇವನೆ ಮಾಡುವ ಅಭ್ಯಾಸ ಹೊಂದಿದ್ದ. ಎಂದಿನಂತೆ ತೀರ್ಥ ಸೇವನೆ ಮಾಡುವಾಗ ಗಮನಿಸದೆ ಲೋಹದ ಕೃಷ್ಣನನ್ನು ನುಂಗಿದ್ದಾನೆ. ಇದರಿಂದ ಆತನಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳಿಯ ವೈದ್ಯರನ್ನು ಚಿಕಿತ್ಸೆಗಾಗಿ ಸಂಪರ್ಕಿಸಿದ್ದಾನೆ. ಆಗ ಸ್ಥಳಿಯ ವೈದ್ಯರು ಎಕ್ಸರೇ ಮಾಡಿಸಲು ಸೂಚಿಸಿದ್ದಾರೆ. ಎಕ್ಸರೇ ರಿಪೋರ್ಟ್ ನಲ್ಲಿ ಕೃಷ್ಣನ ಮೂರ್ತಿ ಗಂಟಲಿನಲ್ಲಿರುವುದು ಪತ್ತೆಯಾಗಿದೆ.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ದಾಖಲಾಗಿದ್ದಾನೆ. ವೈದ್ಯರು ಕೃಷ್ಣನ ಮೂರ್ತಿಯ ಎಡಗಾಲು ವ್ಯಕ್ತಿಯ ಆಹಾರ ನಾಳದಲ್ಲಿ ಸಿಲುಕಿದೆ ಎಂಬುವದನ್ನು ಎಂಡೋಸ್ಕೋಪ್ ಮುಖಾಂತರ ದೃಢಪಡಿಸಿಕೊಂಡ ಇಎನ್‌ಟಿ ವಿಭಾಗದ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ  ವಿಗ್ರಹವನ್ನು  ಹೊರತೆಗೆದಿದ್ದಾರೆ. ಈ ಶಸ್ತ್ರ ಚಿಕಿತ್ಸೆ ವೈದ್ಯರಿಗೆ ಒಂದು ಸವಾಲಾಗಿತ್ತು
ಇಎನ್‌ಟಿ ವಿಭಾದ ವೈದ್ಯರಾದ ಡಾ.ಪ್ರೀತಿ ಹಜಾರೆ, ಡಾ.ವಿನಿತಾ ಮೆಡಗುಡ್ಡಮಠ, ಅರವಳಿಕೆ ವೈದ್ಯ ಡಾ. ಚೈತನ್ಯ ಕಾಮತ್ ತಂಡವು ರೋಗಿಯ ಗಂಟಲಿನಲ್ಲಿರುವ ಕೃಷ್ಣನ ವಿಗ್ರಹವನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆಯಲು ಯಶಸ್ವಿಯಾಗಿದ್ದಾರೆ.
ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿದ ವೈದ್ಯರ ತಂಡವನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ, ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ವಿ ಜಾಲಿ ಅಭಿನಂದಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement