ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 243ಕ್ಕೆ ಏರಿಕೆ ಮಾಡಿ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ

posted in: ರಾಜ್ಯ | 0

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದ ಬೆನ್ನಲ್ಲೇ ಚುನಾವಣೆ ತಯಾರಿ ಶುರುವಾಗಿದೆ.
ಈಗ ರಾಜ್ಯ ಸರ್ಕಾರದಿಂದ ಬಿಬಿಎಂಪಿಯ ವಾರ್ಡ್‌ಗಳನ್ನು ಮರು ವಿಂಗಡನೆಗೊಳಿಸಿ, 243ಕ್ಕೆ ಏರಿಕೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.
ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಶೇಷ ರಾಜ್ಯಪತ್ರ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡುಗಳ ಸಂಖ್ಯೆಯನ್ನು 243 ಎಂದು ನಿಗದಿಪಡಿಸಲಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಬಿಬಿಎಂಪಿಯ ವಾರ್ಡ್ ಗಳ ಪುನ್ ವಿಂಗಡಣಾ ಸಮಿತಿಯ ವರದಿಯ ಅನುಸಾರ, 243ಕ್ಕೆ ಏರಿಸಲಾಗಿದೆ ಎಂದು ತಿಳಿಸಲಾಗಿದೆ.
ಬಿಬಿಎಂಪಿಯ ವಾರ್ಡ್ ಗಳ ಸಂಖ್ಯೆ ಏರಿಕೆ, ವಾರ್ಡ್ ಗಳ ಪುನರ್ ವಿಂಗಡಣೆ ಸಂಬಂಧ ಯಾವುದೇ ಆಕ್ಷೇಪಣೆ, ಸಲಹೆಗಳನ್ನು ಸಲ್ಲಿಸುವವರು, ಲಿಖಿತ ರೂಪದಲ್ಲಿ, ಸೂಕ್ತ ಕಾರಣ, ದಾಖಲೆಗಳೊಂದಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 436, 4ನೇ ಮಹಡಿ, ವಿಕಾಸಸೌಧ, ಬೆಂಗಳೂರು-560001ಕ್ಕೆ ಈ ದಿನಾಂಕದಿಂದ 15 ದಿನಗಳ ಒಳಗಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ನಿಮ್ಮ ಕಾಮೆಂಟ್ ಬರೆಯಿರಿ