ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಆರೋಪಿ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ತೀರ್ಪು

posted in: ರಾಜ್ಯ | 0

ಬೆಳಗಾವಿ: ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ ಭಟ್ ಅವರನ್ನು ಧಾರವಾಡದ ಹೈಕೋರ್ಟ್ ಪೀಠ ನಿರ್ದೋಷಿ ಎಂದು ತೀರ್ಪು ನೀಡಿದೆ.
ದೇಶದಾದ್ಯಂತ ದೊಡ್ಡ ಸದ್ದು ಮಾಡಿದ್ದ ಈ ತ್ರಿವಳಿ ಕೊಲೆ ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ದೇಶದಾದ್ಯಂತ ಭಾರೀ ಸುದ್ದಿಯಾಗಿದ್ದ ಈ ತ್ರಿವಳಿ ಕೊಲೆ ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿತ್ತು. ಆದರೆ, ಹೈಕೋರ್ಟ್ ದ್ವಿಸದಸ್ಯ ಪೀಠವು ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ನೀಡಿ, ಆರೋಪಿಯನ್ನು ಖುಲಾಸೆಗೊಳಿಸಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

2015ರ ಆಗಸ್ಟ್ 16ರಂದು ನಸುಕಿನ ಜಾವ ಬೆಳಗಾವಿ ಕುವೆಂಪು ನಗರದ ಮನೆಯಲ್ಲಿ ತ್ರಿವಳಿ ಕೊಲೆಯಾಗಿತ್ತು. ರೀನಾ ಮಾಲಗತ್ತಿ, ಅವರ ಮಕ್ಕಳಾದ ಆದಿತ್ಯ ಹಾಗೂ ಸಾಹಿತ್ಯ ಅವರನ್ನು ಬೆಡ್ ರೂಮಿನಲ್ಲೇ ಕೊಲೆ ಮಾಡಲಾಗಿತ್ತು. ರೀನಾ ಅವರೂಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪ್ರವೀಣ್ ಭಟ್ ಈ ಕೊಲೆ ಮಾಡಿದ್ದಾನೆ ಎಂಬುದಾಗಿ ರೀನಾ ಅವರ ಸಹೋದರ ದೂರು ದಾಖಲಿಸಿದ್ದರು.
ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2018ರ ಏಪ್ರಿಲ್ 16ರಂದು ಪ್ರವೀಣ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಆದರೆ, ಈ ಆದೇಶವನ್ನು ತಡೆಹಿಡಿದ ಧಾರವಾಡ ಹೈಕೋರ್ಟ್ ಪೀಠವು, ಸಾಕ್ಷ್ಯಾಧಾರಗಳ ಕೊರತೆ ಮೇಲೆ ಜೂನ್ 21ರಂದು ಆರೋಪಿಯನ್ನು ಖುಲಾಸೆಗೊಳಿಸಿದೆ. ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಹಾಗೂ ಎಂ.ಜಿ.ಎಸ್ ಕಮಲ್ ಅವರಿದ್ದ ಪೀಠ ಈ ತೀರ್ಪು ನೀಡಿದೆ.

ಓದಿರಿ :-   ದೇವೇಗೌಡರ ಕುರಿತು ಆಕ್ಷೇಪಾರ್ಹ ಹೇಳಿಕೆ: ಕ್ಷಮೆಯಾಚಿಸಿದ ಕೆ.ಎನ್‌.ರಾಜಣ್ಣ

 

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ