ಹಾಸನ, ಕೊಡಗು ಜಿಲ್ಲೆಯ ಹಲವೆಡೆ ಭೂ ಕಂಪನ

ಹಾಸನ/ಮಡಿಕೇರಿ: ಹಾಸನ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಇಂದು, ಗುರುವಾರ ಬೆಳಗಿನಜಾವ 4:30ರ ಸುಮಾರಿಗೆ ಭೂಮಿ‌ ಕಂಪಿಸಿಸದ ಅನುಭವವಾಗಿದೆ ಎಂದು ಹಲವರು ಹೇಳಿದ್ದಾರೆ. ನಂತರ ಹಾಸನ ಜಿಲ್ಲೆಯ ಹಲವೆಡೆ 3.4 ತೀವ್ರತೆಯ ಕಂಪನವಾಗಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಧಿಕೃತವಾಗಿ ತಿಳಿಸಿದೆ.
ಇಂದು ಬೆಳಿಗ್ಗೆ ಹಾಸನದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು ಜನ ಆಂತಕಿತರಾಗಿದ್ದರು. ಹೊಳೇನರಸಿಪುರ, ಅರಕಲಗೂಡು ಸೇರಿದಂತೆ ಹಾಸನ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ.

ಅಲ್ಲದೆ, ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದ ರೇಂಜರ್ ಬ್ಲಾಕ್ ಮತ್ತು ನೇಗಳ್ಳೆ ಗ್ರಾಮ, ಮಡಿಕೇರಿ ತಾಲೂಕಿನ ದೇವಸ್ತೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಸಣ್ಣ ಪ್ರಮಾಣದ ಕಂಪನದ ಅನುಭವ ಉಂಟಾಗಿದೆ. ಮುಂಜಾನೆ 4:37ರ ವೇಳೆಗೆ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ. ಹಾಸನ‌ ಜಿಲ್ಲೆಯ ಹೊಳೆನರಸೀಪುರದಿಂದ 16 ಕಿಲೋ ಮೀಟರ್ ದಕ್ಷಿಣಕ್ಕೆ ಕಂಪನದ ಕೇಂದ್ರ ಬಿಂದು ಗುರುತಿಸಲ್ಪಟ್ಟಿದೆ. ಹೀಗಾಗಿ ಆ ಕೇಂದ್ರಕ್ಕೆ ಹೊಂದಿಕೊಂಡ ಭಾಗಗಳಲ್ಲಿ ಭೂ ಕಂಪನದ ಅನುಭವವಾಗಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement