ನೀತಿ ಆಯೋಗದ ನೂತನ ಸಿಇಒ ಆಗಿ ಪರಮೇಶ್ವರನ್‌ ಅಯ್ಯರ್‌ ನೇಮಕ

ನವದೆಹಲಿ: ಐಎಎಸ್‌ (IAS) ಅಧಿಕಾರಿ ಪರಮೇಶ್ವರನ್ ಅಯ್ಯರ್ ಅವರನ್ನು ನೀತಿ (NITI) ಆಯೋಗದ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಶುಕ್ರವಾರ ನೇಮಿಸಲಾಗಿದೆ.
ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಇವರ ನೇಮಕಾತಿಯನ್ನು ಪ್ರಕಟಿಸಿದೆ. ಅವರು ಎರಡು ವರ್ಷಗಳ ಅವಧಿಗೆ ಈ ಹುದ್ದೆಯಲ್ಲಿರುತ್ತಾರೆ.

advertisement

ಪ್ರಸ್ತುತ ಸಿಇಒ ಅಮಿತಾಭ್ ಕಾಂತ್ ಅವರ ಅಧಿಕಾರಾವಧಿಯು ಜೂನ್ 30, 2022 ರಂದು ಪೂರ್ಣಗೊಳ್ಳಲಿದ್ದು, ನಂತರ ಅಯ್ಯರ್ ಅವರ ಅವಧಿಯು ಪ್ರಾರಂಭವಾಗುತ್ತದೆ. ಸಿಬ್ಬಂದಿ ಸಚಿವಾಲಯದ ಆದೇಶವು ಕಾಂತ್‌ಗೆ ಅನ್ವಯವಾಗುವ ಅದೇ ನಿಯಮಗಳು ಮತ್ತು ಷರತ್ತುಗಳ ಮೇಲೆ ಅಯ್ಯರ್ ಅವರ ನೇಮಕಾತಿಯನ್ನು ಮಾಡಲಾಗಿದೆ ಎಂದು ಹೇಳಿದೆ.
ಅಯ್ಯರ್, ಉತ್ತರ ಪ್ರದೇಶ ಕೇಡರ್‌ನ 1981-ಬ್ಯಾಚ್‌ನ IAS ಅಧಿಕಾರಿ ಮತ್ತು ಪ್ರಸಿದ್ಧ ನೈರ್ಮಲ್ಯ ತಜ್ಞರು. ಕಳೆದ ವರ್ಷ ಜುಲೈನಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಅಯ್ಯರ್ ಅವರು 2009 ರಲ್ಲಿ ಭಾರತೀಯ ಆಡಳಿತ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ಅವರು ವಿಶ್ವಸಂಸ್ಥೆಯಲ್ಲಿ ಹಿರಿಯ ಗ್ರಾಮೀಣ ನೀರು ನೈರ್ಮಲ್ಯ ತಜ್ಞರಾಗಿಯೂ ಕೆಲಸ ಮಾಡಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಬಿಡುಗಡೆಗೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜೀವ್ ಗಾಂಧಿ ಹಂತಕಿ ನಳಿನಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement