ಮೂಡಲಗಿ : ಹಳ್ಳದಲ್ಲಿ ಪತ್ತೆಯಾದ ಏಳು ಮೃತ ಭ್ರೂಣಗಳು

posted in: ರಾಜ್ಯ | 0

ಬೆಳಗಾವಿ: ಜಿಲ್ಲೆಯ ಮೂಡಲಗಿ ಪಟ್ಟಣದೊಳಗೆ ಹರಿದ ಹಳ್ಳದಲ್ಲಿ ಶುಕ್ರವಾರ ಮಧ್ಯಾಹ್ನ, ಸತ್ತ ಏಳು ಭ್ರೂಣಗಳು ‍‍ಪತ್ತೆಯಾಗಿವೆ. ಈ ದೃಶ್ಯ ಕಂಡು ಪಟ್ಟಣದ ಜನ ಬೆಚ್ಚಿಬಿದ್ದಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹೊರವಲಯದಲ್ಲಿರುವ ಹಳ್ಳಕ್ಕೆ ಕಿರಾತಕರು ಏಳು ಭ್ರೂಣಗಳ ಮೃತದೇಹವನ್ನು ಎಸೆದಿದ್ದಾರೆ. ಐದು ಡಬ್ಬದಲ್ಲಿ ಏಳು ಭ್ರೂಣಗಳನ್ನು ಹಾಕಿ ಹಳ್ಳಕ್ಕೆ ಎಸೆದಿರುವುದು ಪತ್ತೆಯಾಗಿದೆ. ಹಳ್ಳಕ್ಕೆ ಬಟ್ಟೆ ತೊಳೆಯಲು ಬಂದವರಿಗೆ ಪ್ಲಾಸ್ಟಿಕ್‌ ಡಬ್ಬಗಳು ಕಂಡವು. ಹತ್ತಿರ ಹೋಗಿ ನೋಡಿದಾಗ ಅದರಲ್ಲಿ ಭ್ರೂಣಗಳನ್ನು ಹಾಕಿ, ಮುಚ್ಚಳ ಮುಚ್ಚಿರುವುದು ಕಂಡುಬಂದಿದೆ. ಚಾಕೊಲೇಟ್‌ ಮಾರಾಟಕ್ಕೆ ಬಳಸುವ ಐದು ಪ್ಲಾಸ್ಟಿಕ್‌ ಡಬ್ಬಗಳಲ್ಲಿ ಏಳೂ ಭ್ರೂಣಗಳನ್ನು ಹಾಕಿ ಮುಚ್ಚಳ ಮುಚ್ಚಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭ್ರೂಣಗಳಿದ್ದ ಡಬ್ಬಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ 7 ನವಜಾತ ಶಿಶುಗಳು ಪತ್ತೆಯಾಗಿದೆ. ಇದನ್ನು ಯಾರು ಎಸೆದರು ಹಾಗೂ ಯಾಕಾಗಿ ಎಸೆದರು ಎನ್ನುವುದು ನಿಗೂಢವಾಗಿದೆ. ಗರ್ಭಪಾತ ಮಾಡಿ ಭ್ರೂಣಗಳನ್ನು ಎಸೆದಿರಬಹುದು ಎಂದು ಶಂಕಿಸಲಾಗಿದೆ. ತನಿಖೆಯಿಂದ ಇದರ ಹಿಂದಿನ ಸತ್ಯಾಸತ್ಯತೆ ಗೊತ್ತಾಗಲಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಶೀಘ್ರವೇ 15000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ: ಗೃಹ ಸಚಿವ ಡಾ. ಜಿ.ಪರಮೇಶ್ವರ

ತನಿಖೆಗೆ ತಂಡ ರಚನೆ:
ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಕೋಣಿ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ತಕ್ಷಣಕ್ಕೆ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಭ್ರೂಣಗಳನ್ನು ಏಕೆ ಹತ್ಯೆ ಮಾಡಲಾಗಿದೆ, ಯಾವಾಗ ಹಳ್ಳಕ್ಕೆ ಎಸೆಯಲಾಗಿದೆ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.
ಭ್ರೂಣಗಳನ್ನು ಬೆಳಗಾವಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತರಲಾಗುವುದು. ಈ ಭ್ರೂಣಗಳ ಹತ್ಯೆಗೆ ಸಂಬಂಧಿಸಿದಂತೆ ಪ್ರತ್ಯೇಕ ತಂಡ ರಚನೆ ಮಾಡಲಾಗುವುದು. ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಗಂಭೀರವಾಗಿ ತನಿಖೆ ನಡೆಸಲಾಗುವುದು ಎಂದರು.

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement