ಶಿರಸಿ: ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರಗೆ ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, 2022ನೇ ಸಾಲಿನ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ ಅವರನ್ನು ಆಯ್ಕೆ ಮಾಡಲಾಗಿದೆ.
ಜುಲೈ 1ರಂದು ಶಿರಸಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆ ಸಮಿತಿಯು ಅಶೋಕ ಹಾಸ್ಯಗಾರ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಸಿದ್ದಾಪುರ ತಾಲೂಕಿನವರಾದ ಅಶೋಕ ಹಾಸ್ಯಗಾರ ಉತ್ತರ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತರಲ್ಲಿ ಓರ್ವರು. ಪ್ರಸ್ತುತ ಅವರು ಶಿರಸಿಯ ಜನಮಾಧ್ಯಮ ಪತ್ರಿಕೆಯ ಸಂಪಾದಕರಾಗಿ 5 ವರ್ಷಗಳಿಂದ ಕಾರ್ಯನಿರ್ವಹಿಸಿದ್ದಾರೆ. ಇದಕ್ಕೂ ಮೊದಲು ಕಾರವಾರದ ಕರಾವಳಿ ಮುಂಜಾವು ದಿನಪತ್ರಿಕೆಯಲ್ಲಿ 15 ವರ್ಷ ಹಾಗೂ ಲೋಕಧ್ವನಿ ಪತ್ರಿಕೆಯಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ.

1983ರಲ್ಲಿ ಕಾರವಾರದಲ್ಲಿ ಲೋಕಧ್ವನಿ ವರದಿಗಾರನಾಗಿ ಪತ್ರಿಕಾ ರಂಗಕ್ಕೆ ಕಾಲಿಟ್ಟರು. ಜನಮಾಧ್ಯಮ, ಹುಬ್ಬಳ್ಳಿಯ ನವನಾಡು, ಬೆಳಗಾವಿಯ ಕನ್ನಡಮ್ಮ ಪತ್ರಿಕೆಯಲ್ಲೂ ಸಹ ವರದಿಗಾರನಾಗಿ ಕೆಲಸ ನಿರ್ವಹಿಸಿದವರು. ಭಾರತೀಯ ಆಕಾಶವಾಣಿ (ಪ್ರಸಾರಭಾರತಿಯಲ್ಲಿ) ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ದಶಕಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿರುವ ಇವರು ಕವಿಯೆಡೆಗೆ ಬಂದ ಕವಿತೆ ಎನ್ನುವ ಕವನ ಸಂಕಲನ ಪ್ರಕಟಿಸಿದ್ದಾರೆ. ತುಡುಗುಣಿ ತಾಳಮದ್ದಲೆ ಪರಂಪರೆ, ಹೂತನ ಚಿರನೂತನ, ಜನಮನದಲ್ಲಿ ಜಯರಾಮ, ಫ್ರೋ ಧರಣೇಂಧ್ರ ಕುರಕುರಿ ಅಭಿನಂದನಾ ಗ್ರಂಥ, ಕರ್ಮಯೋಗಿ ವೈದ್ಯರತ್ನ ಬಾಳುರಾಯರು ಮುಂತಾದ ಕೃತಿಗಳು ಇವರ ಸಂಪಾದನೆಯಲ್ಲಿ ಪ್ರಕಟಗೊಂಡಿವೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement