ಕರ್ನಾಟಕದಲ್ಲಿ ಶುಕ್ರವಾರ 816 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದು, ಸಾವಿನ ಪ್ರಕರಣ ಶೂನ್ಯವಾಗಿದೆ. ಕಳೆದ 24 ಗಂಟೆಯಲ್ಲಿ 816 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇದೇವೇಳೆ 703 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ 39,19,155 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 22,527 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ರಾಜ್ಯದಲ್ಲಿ 5,180 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಪಾಸಿಟಿವಿಟಿ ದರ ಶೇ.3.62 ಇದೆ.
ಬೆಂಗಳೂರು ನಗರದಲ್ಲಿ 776 ಪ್ರಕರಣಗಳು ಪತ್ತೆಯಾಗಿದ್ದು, ಬಳ್ಳಾರಿ 3, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 4, ಕಲಬುರಗಿ 3, ಕೋಲಾರ 2, ಮಂಡ್ಯ 1, ಮೈಸೂರು 8, ರಾಮನಗರ 2, ಶಿವಮೊಗ್ಗ 2, ಉಡುಪಿಯಲ್ಲಿ ಮೂರು ಪ್ರಕರಣಗಳು ಇಂದಿನ ಹೆಲ್ತ್ ಬುಲೆಟಿನ್‍ನಲ್ಲಿ ವರದಿಯಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement