ಮೋದಿಜಿ 19 ವರ್ಷಗಳ ಕಾಲ ಮೌನ ತಾಳಿದ್ದಾರೆ: ಗುಜರಾತ್ ಗಲಭೆ ಕುರಿತು ಸುಪ್ರೀಂಕೋರ್ಟ್‌ ತೀರ್ಪಿನ ನಂತರ ಅಮಿತ್ ಶಾ

ನವದೆಹಲಿ: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ “ಸುಳ್ಳು ಆರೋಪಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು 19 ವರ್ಷಗಳ ಕಾಲ ಮೌನವಾಗಿ ಸಹಿಸಿಕೊಂಡಿದ್ದಾರೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. .
ಮೋದಿ ಅವರು 19 ವರ್ಷಗಳ ಕಾಲ ಮೌನವಾಗಿ ಸುಳ್ಳು ಆರೋಪಗಳನ್ನು ಸಹಿಸಿಕೊಂಡರು, ಯಾರೂ ಧರಣಿ ಮಾಡಲಿಲ್ಲ” ಎಂದು ಶಾ ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದರು,
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಜಾರಿ ನಿರ್ದೇಶನಾಲಯದ ವಿಚಾರಣೆಯ ಬಗ್ಗೆ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಮೋದಿ ನೋವನ್ನು ಸಹಿಸಿಕೊಳ್ಳುವುದನ್ನು ನಾನು ಹತ್ತಿರದಿಂದ ನೋಡಿದ್ದೇನೆ, ಸತ್ಯದ ಪರವಾಗಿದ್ದರೂ ಆರೋಪಗಳನ್ನು ಎದುರಿಸಿದ್ದಾರೆ ಮತ್ತು ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿರುವುದರಿಂದ ಅವರು ಮಾತನಾಡಲಿಲ್ಲ. ದೃಢವಾದ ವ್ಯಕ್ತಿ ಮಾತ್ರ ಇದನ್ನು ಮಾಡಲು ಸಾಧ್ಯ” ಎಂದು ಅಮಿತ್‌ ಶಾ ಹೇಳಿದರು.

ಪ್ರಜಾಪ್ರಭುತ್ವದಲ್ಲಿ, ಎಲ್ಲ ರಾಜಕೀಯ ವ್ಯಕ್ತಿಗಳು ಸಂವಿಧಾನವನ್ನು ಹೇಗೆ ಗೌರವಿಸಬೇಕು ಎಂಬುದಕ್ಕೆ ಪ್ರಧಾನಿ ಮೋದಿ ಆದರ್ಶ ಉದಾಹರಣೆಯನ್ನು ಪ್ರಸ್ತುತಪಡಿಸಿದರು. ಮೋದಿಯವರನ್ನೂ ಪ್ರಶ್ನಿಸಲಾಯಿತು, ಆದರೆ ಯಾರೂ ಪ್ರತಿಭಟಿಸಲಿಲ್ಲ. ನಾವು ಕಾನೂನಿಗೆ ಸಹಕರಿಸಿದರು. ನನ್ನನ್ನೂ ಬಂಧಿಸಲಾಯಿತು.ಯಾವುದೇ ಪ್ರತಿಭಟನೆ ನಡೆದಿಲ್ಲ” ಎಂದು ಅವರು ಹೇಳಿದರು.
ಹಿಂಸಾಚಾರದಲ್ಲಿ ಹತ್ಯೆಗೀಡಾದ ಕಾಂಗ್ರೆಸ್ ಸಂಸದರ ಪತ್ನಿ ಪ್ರಕರಣದಲ್ಲಿ ಪ್ರಧಾನಿ ಮೋದಿಗೆ ಎಸ್‌ಐಟಿ ಕ್ಲೀನ್‌ಚಿಟ್‌ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಕೊರ್ಟ್‌ ವಜಾಗೊಳಿಸಿದೆ. ಮೇಲ್ಮನವಿ ಅರ್ಜಿ ಯಾವುದೇ ಅರ್ಹತೆ ಹೊಂದಿಲ್ಲ ಹೇಳಿದೆ. ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಎಂದು ಕರೆಯಲ್ಪಡುವ ಮೂರು ದಿನಗಳ ಗಲಭೆಯ ಮೊದಲ ದಿನದಂದು 68 ಜನರು ಕೊಲ್ಲಲ್ಪಟ್ಟ ಪ್ರಕರಣಕ್ಕೆ ಸಂಬಂಪಟ್ಟಂತೆ ಸಾವಿಗೀಡಾದ ಕಾಂಗ್ರೆಸ್ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಮೇಲ್ಮನವಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement