ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುರ್ಮು ಕುರಿತು ವಿವಾದಾತ್ಮಕ ಟ್ವೀಟ್‌ ಮಾಡಿದ ನಿರ್ದೇಶಕ ರಾಮಗೋಪಾಲ ವರ್ಮ

ಬೆಂಗಳೂರು : ಭಾರತದ ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮ ಅವರ ಕುರಿತು ನಿರ್ದೇಶಕ ರಾಮ್‌ ಗೋಪಾಲ್‌ ವರ್ಮ ಅವರು ವಿವಾದಾತ್ಮಕ ಹೇಳಿಕೆಯನ್ನು ಟ್ವೀಟ್‌ ಮಾಡಿದ್ದಾರೆ.
ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ಅದಕ್ಕಿಂತ ಮುಖ್ಯವಾಗಿ, ಕೌರವರು ಯಾರು? ಎಂದು ಟ್ವೀಟ್‌ ಮಾಡಿದ್ದು, ಈ ಬಗ್ಗೆ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಹೈದರಾಬಾದ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮುರ್ಮು ಅವರ ಬಗ್ಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವಹೇಳನಕಾರಿಯಾಗಿದೆ ಎಂದು ತೆಲಂಗಾಣದ ಹಿರಿಯ ಬಿಜೆಪಿ ನಾಯಕ ಜಿ ನಾರಾಯಣ ರೆಡ್ಡಿ ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
“ಈ ಟ್ವೀಟ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಅಗೌರವ ತೋರಿದಂತಿದೆ. ಇಲ್ಲಿ ಅವರು ‘ದ್ರೌಪದಿ’ಯನ್ನು ರಾಷ್ಟ್ರಪತಿ ಎಂದು ಕರೆಯುತ್ತಾರೆ. ಬಿಜೆಪಿ ಕಾರ್ಯಕರ್ತರಿಗೆ ರಾಮಗೋಪಾಲ ವರ್ಮಾ ಅವರ ಕಾಮಂಟ್‌ಗಳಿಂದ ನೋವಾಗಿದೆ ಎಂದು ನಾರಾಯಣ ರೆಡ್ಡಿ ಹೇಳಿದ್ದಾರೆ.

ತಮ್ಮ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಮಗೋಪಾಲ ವರ್ಮ ಅವರು, “ಇದು ಬೇರೆ ರೀತಿಯಲ್ಲಿ ಉದ್ದೇಶಿಸಿ ಹೇಳಿದ್ದಲ್ಲ. ಇದು ಜಸ್‌ ಐರನಿ, ಮಹಾಭಾರತದಲ್ಲಿ ದ್ರೌಪದಿ ನನ್ನ ನೆಚ್ಚಿನ ಪಾತ್ರ. ಆದರೆ, ಹೆಸರು ಅಪರೂಪವಾಗಿರುವುದರಿಂದ ನಾನು ಅದಕ್ಕೆ ಸಂಬಂಧಿಸಿದ ಪಾತ್ರಗಳನ್ನು ನೆನಪಿಸಿಕೊಂಡಿದ್ದೇನೆ ಮತ್ತು ಆದ್ದರಿಂದ ನನ್ನ ಅಭಿವ್ಯಕ್ತಿ ಯಾರ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement