ಕರ್ನಾಟಕದ ಕರಾವಳಿಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್, ಉತ್ತರ ಕರ್ನಾಟಕಕ್ಕೆ ಹಳದಿ​ ಅಲರ್ಟ್​ ಘೋಷಣೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದ್ದು, ಮಲೆನಾಡಿನಲ್ಲೂ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ.
ಇಂದಿನಿಂದ 2 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆ ಅಬ್ಬರಿಸಲಿದೆ ಎಂದು ಹೇಳಿದೆ.

ಜೂನ್ 26ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಕಲಬುರ್ಗಿ, ಯಾದಗಿರಿ, ಬೀದರ್, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಹಳದಿ ಅಲರ್ಟ್‌ (Yellow Alert) ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ಪ್ರವಾಸಗರಿಗೆ ಇನ್ನೆರಡು ದಿನ ಕಡಲತೀರಗಳಿಗೆ, ಜಲಪಾತಗಳಿಗೆ ತೆರಳದಂತೆ ಸೂಚಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement