ತಡವಾಗಿ ಬಂದಿದ್ದಕ್ಕೆ ಶಿಕ್ಷಾ ಮಿತ್ರ ಶಿಕ್ಷಕಿಗೆ ಶೂಗಳಿಂದ ಥಳಿಸಿದ ಸರ್ಕಾರಿ ಶಾಲೆಯ ಪ್ರಾಂಶುಪಾಲರು…! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಲಕ್ನೋ: ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಾ ಮಿತ್ರ ಶಿಕ್ಷಕಿಗೆ ಶಾಲಾ ಪ್ರಾಂಶುಪಾಲರು ಶೂಗಳಿಂದ ಥಳಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯ ವೀಡಿಯೊ ವೈರಲ್ ಆಗಿದೆ. ಖೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹಂಗು ಖೇರಾ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಶಿಕ್ಷಾ ಮಿತ್ರ ಶಿಕ್ಷಕಿಯನ್ನು ಅಮಾನುಷವಾಗಿ ನಡೆಸಿಕೊಂಡ ಆರೋಪದ ಮೇಲೆ ಲಖೀಂಪುರ ಬ್ಲಾಕ್‌ನ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖೇರಿ ಮೂಲ ಶಿಕ್ಷಣ ಅಧಿಕಾರಿ ಲಕ್ಷ್ಮೀಕಾಂತ್ ಪಾಂಡೆ ತಿಳಿಸಿದ್ದಾರೆ.

ಮುಖ್ಯ ಶಿಕ್ಷಕರು ಮಹಿಳೆಗೆ ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಲಖೀಂಪುರ ಬ್ಲಾಕ್ ಶಿಕ್ಷಣಾಧಿಕಾರಿ ಸುಭಾಷ್ ಚಂದ್ರ ಅವರು ಖೇರಿ ಮೂಲ ಶಿಕ್ಷಣಾಧಿಕಾರಿ ಲಕ್ಷ್ಮೀಕಾಂತ ಪಾಂಡೆ ಅವರಿಗೆ ವರದಿ ಕಳುಹಿಸಿದ್ದಾರೆ.

https://twitter.com/ANINewsUP/status/1540304574757515265?ref_src=twsrc%5Etfw%7Ctwcamp%5Etweetembed%7Ctwterm%5E1540304574757515265%7Ctwgr%5E%7Ctwcon%5Es1_&ref_url=https%3A%2F%2Fwww.dnaindia.com%2Fviral%2Freport-up-shocker-government-school-principal-beats-woman-shiksha-mitra-with-shoes-coming-late-lakhimpur-kheri-2963358

ಪ್ರಕರಣದ ತನಿಖೆ ನಡೆಯುವವರೆಗೆ ತಪ್ಪಿತಸ್ಥ ಮುಖ್ಯ ಶಿಕ್ಷಕರನ್ನು ಪಾಸ್‌ಗಾವಾನ್ ಜೂನಿಯರ್ ಹೈಸ್ಕೂಲ್‌ಗೆ ಲಗತ್ತಿಸಲಾಗಿದೆ ಎಂದ ಪಾಂಡೆ, ಅಮಾನತುಗೊಂಡ ಮುಖ್ಯ ಶಿಕ್ಷಕರ ಹಾಜರಾತಿ ವರದಿಯನ್ನು ಪ್ರತಿದಿನ ತಮ್ಮ ಕಚೇರಿಗೆ ಸಲ್ಲಿಸುವಂತೆ ಪಾಸ್‌ಗವಾನ್ ಬಿಇಒಗೆ ಸೂಚಿಸಲಾಗಿದೆ ಎಂದು ಹೇಳಿದರು.ಪ್ರಕರಣದ ತನಿಖೆ ನಡೆಸಿ ಆದಷ್ಟು ಬೇಗ ವರದಿ ಸಲ್ಲಿಸಲು ಮೂವರು ಸದಸ್ಯರ ತಂಡವನ್ನು ಕೂಡ ರಚಿಸಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement