ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರುನಾಮಕರಣ-ಇನ್ಮುಂದೆ ಹೊಸ ಹೆಸರು: ಸರ್ಕಾರದ ಆದೇಶ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹೆಸರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರುನಾಮಕರಣ ಮಾಡಲಾಗಿದೆ. ಪ್ರಾಥಮಿಕ, ಮತ್ತು ದ್ವಿತೀಯ ಪಿಯು ಶಿಕ್ಷಣ ಇಲಾಖೆ ಒಟ್ಟುಗೂಡಿಸಿ ಮರುನಾಮಕರಣ ಮಾಡಲಾಗಿದೆ.
ದೇಶದ ಹಲವು ರಾಜ್ಯಗಳಲ್ಲಿ 1 ನೇ ತರಗತಿಯಿಂದ 12 ನೇ ತರಗತಿ ವರೆಗೂ ಒಂದೇ ಇಲಾಖೆಗೆ ಒಳಪಡುತ್ತಿದೆ. 2020ರ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಈ ಅಂಶ ಹೇಳಲಾಗಿದೆ. ಹೀಗಾಗಿ ಪ್ರಾಥಮಿಕ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಒಟ್ಟುಗೂಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರುನಾಮಕರಣ ಮಾಡಿ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್ ಎಸ್ ಶಿವಕುಮಾರ್ ಆದೇಶಿಸಿದ್ದಾರೆ.

ದೇಶದ ಬಹುತೇಕ ಎಲ್ಲ ರಾಜ್ಯಗಳಲ್ಲಿ, 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೆ ಒಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ನೀಡಿ 2021 ರಲ್ಲಿಯೂ ಸಹ ಸದರಿ ಅಂಶವನ್ನು ಪುನರುಚ್ಚರಿಸಲಾಗಿದೆ. ಈ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ (ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ) ಪದನಾಮವನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಬದಲಾಯಿಸುವುದು ಸೂಕ್ತ ಎಂದು ವಿವಿಧ ಹಂತದ ಚರ್ಚೆಯಲ್ಲಿ ತಜ್ಞರು ಅಭಿಪ್ರಾಯಿಸಿದ್ದಾರೆ,

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈಗಾಗಲೇ ಕೇಂದ್ರ ಸರ್ಕಾರ ಹಾಗೂ ಹೆಚ್ಚಿನ ರಾಜ್ಯಗಳಲ್ಲಿ ಶಾಲಾ ಶಿಕ್ಷಣ ಇಲಾಖೆ’ ಎಂಬ ಪದನಾಮ ರೂಢಿಯಲ್ಲಿರುವುದರಿಂದ ರಾಜ್ಯದಲ್ಲಿಯೂ ಸಹ ಇದೇ ಮಾದರಿ ಅಳವಡಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿದ್ದು, ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆಡಳಿತ ಸುಧಾರಣೆಯ ಅಭಿಪ್ರಾಯವನ್ನು ಪಡೆಯಲಾಗಿದೆ ಎಂದು ತಿಳಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಎಂದು ಕರೆಯಲ್ಪಡುವ ಇಲಾಖೆಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮರು ನಾಮಕರಣಗೊಳಿಸಿ ಆದೇಶಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement