ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಘೋಷಿಸಿದ ಮಾಯಾವತಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್ ರೆಡ್ಡಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಘೋಷಿಸಿದ ನಂತರ ಈಗ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಕೂಡ ಮುರ್ಮು ಅವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.
ಬಿಎಸ್‌ಪಿ ಆದಿವಾಸಿ ಸಮಾಜದ ಚಳವಳಿಯ ಪ್ರಮುಖ ಭಾಗವಾಹಿದೆ. ಹೀಗಾಗಿ ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು ಮಾಯಾವತಿ ಹೇಳಿದ್ದಾರೆ.

ಈ ನಿರ್ಧಾರವು ಬಿಜೆಪಿ ಅಥವಾ ಎನ್‌ಡಿಎ ಮೈತ್ರಿಯನ್ನು ಬೆಂಬಲಿಸುವ ಅಥವಾ ಪ್ರತಿಪಕ್ಷಗಳು ಮತ್ತು ಯುಪಿಎ ವಿರುದ್ಧದ ನಿಲುವಲ್ಲ. ಆದರೆ ನಮ್ಮ ಪಕ್ಷ ಮತ್ತು ಚಳವಳಿಗಳನ್ನು ಗಮನದಲ್ಲಿಟ್ಟುಕೊಂಡು ಸಮರ್ಥ ಆದಿವಾಸಿ ಮಹಿಳೆಯನ್ನು ದೇಶದ ರಾಷ್ಟ್ರಪತಿ ಮಾಡುತ್ತಿರುವುದನ್ನು ಗಮನದಲ್ಲಿಟ್ಟು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬಿಎಸ್‌ಪಿ ಲೋಕಸಭೆಯಲ್ಲಿ 10 ಮಂದಿ ಸಂಸದರನ್ನು ಹೊಂದಿದೆ. ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆ ಮಾಡುವಾಗ ತಮ್ಮೊಂದಿಗೆ ಸಮಾಲೋಚನೆ ಮಾಡಿಲ್ಲ ಎಂದು ಹೇಳಿದ್ದಾರೆ. ರಾಷ್ಟ್ರಪತಿ ಸ್ಥಾನಕ್ಕೆ ದ್ರೌಪದಿ ಮುರ್ಮು ಅವರು ಎನ್‌ಡಿಎ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement