ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕರಾರು ಪತ್ರ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಮ್ಮಕ್ಕ ಅವರಿಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು.
ಕೆಲ ದಿನಗಳ ಹಿಂದಷ್ಟೇ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು. ನಂತರ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕ ಅವರಿಗೆ ನೀಡಿತ್ತು.

ಇಂದು, ಶನಿವಾರ (ಜೂನ್​ 25) ಮುಂಜಾನೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ತಿಮ್ಮಕ್ಕ ಹಾಗೂ ಅವರ ಸಾಕು ಮಗನಿಗೆ ಕರಾರು ಪತ್ರವನ್ನು ವಿತರಣೆ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದು ವಿಶ್ವನಾಥ್ ಅವರು ಹೇಳಿದ್ದಾರೆ. ತಿಮ್ಮಕ್ಕಳಿಗೆ ಒಟ್ಟು 50×80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement