ನಾಳೆಯಿಂದ ಎಸ್​ಎಸ್​ಎಲ್​​ಸಿ ಪೂರಕ ಪರೀಕ್ಷೆ

ಬೆಂಗಳೂರು: ಎಸ್​ಎಸ್​ಎಲ್​​ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ನಾಳೆಯಿಂದ (ಜೂನ್‌ 27ರಿಂದ)ಜುಲೈ 4ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ರಾಜ್ಯದಲ್ಲಿ ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement