ಬೆಳಗಾವಿ: ನಾಲಾಕ್ಕೆ ಬಿದ್ದ ಕ್ರೂಸರ್ ವಾಹನ, 7 ಜನರ ಸಾವು

posted in: ರಾಜ್ಯ | 0

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನ ಬಳ್ಳಾರಿ ನಾಲಾಕ್ಕೆ ಬಿದ್ದು 7 ಮಂದಿ ಸಾವಿಗೀಡಾದ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಫೂಲ್ ಬಳಿ ಭಾನುವಾರ (ಜೂನ್​ 26) ನಡೆದ ಬಗ್ಗೆ ವರದಿಯಾಗಿದೆ. ಹಲವರು ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್​ ವಾಹನ ಬಿದ್ದಿದೆ. ದಿನಗೂಲಿ ಕೆಲಸಕ್ಕೆಂದು ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳ ಗ್ರಾಮದಿಂದ ಬೆಳಗಾವಿಗೆ ಬರುತ್ತಿದ್ದಾಗ ಘಟನೆ ನಡೆದಿದೆ ಎಂದು ಹೇಳಲಾಗಿದೆ.ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಬಿದ್ದು ಅವಘಡ ಸಂಭವಿಸಿದೆ. ವಾಹನದಲ್ಲಿ ಒಟ್ಟು 17ಕ್ಕೂ ಅಧಿಕ ಕಾರ್ಮಿಕರಿದ್ದರು ಎನ್ನಲಾಗುತ್ತಿದೆ.
ಸ್ಥಳಕ್ಕೆ ಮಾರಿಹಾಳ ಠಾಣಾ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ. ಹೆಚ್ಚಿನ ವಿವರ ತಿಳಿದುಬರಬೇಕಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಬೆಳಗಾವಿ ಐಟಿಬಿಪಿ ಶಿಬಿರದಲ್ಲಿ ಎಕೆ-47 ರೈಫಲ್​ಗಳ ಕಳ್ಳತನ

ನಿಮ್ಮ ಕಾಮೆಂಟ್ ಬರೆಯಿರಿ

advertisement