ಲಾರಿ-ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

posted in: ರಾಜ್ಯ | 0

ಮಂಡ್ಯ: ಜಿಲ್ಲೆಯ ನಾಗಮಂಗಲ ಹೊರವಲಯದ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯ ಎಂ.ಹೊಸೂರು ಗೇಟ್ ಬಳಿ ಶನಿವಾರ ರಾತ್ರಿ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಮತ್ತೋರ್ವರ ಸ್ಥಿತಿ ಗಂಭಿರವಾಗಿದೆ ಎಂದು ವರದಿಯಾಗಿದೆ.
ಮೃತರನ್ನು ನಾಗಮಂಗಲ ತಾಲೂಕಿನ ಬೀರೇಶ್ವರಪುರದ ದೇವರಾಜು, ಪಾಂಡವಪುರ ತಾಲ್ಲೂಕಿನ ವದೇಸಮುದ್ರ ಗ್ರಾಮದ ನಿವಾಸಿ, ಕನಗನಮರಡಿ ವೃತ್ತದ ಗ್ರಾಮ ಸಹಾಯಕ ಮಂಜುನಾಥ, ಕೆನ್ನಾಳು ಗ್ರಾಮದ ರೈತ ಮಂಜುನಾಥ ಎಂದು ಗುರುತಿಸಲಾಗಿದೆ.

advertisement

ಪಾಂಡವಪುರ ತಾಲೂಕಿನ ಎಲೆಕೆರೆ ಗ್ರಾಮದ ನಿವಾಸಿ ದಾಮರಹಳ್ಳಿ ವೃತ್ತದ ಗ್ರಾಮ ಸಹಾಯಕ ಸ್ವಾಮಿ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮದ್ಯ ತುಂಬಿದ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ನಾಗಮಂಗಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಹೊನ್ನಾವರ: ಸೊಳ್ಳೆ ನಾಶಕ ಲಿಕ್ವಿಡ್‌ ಕುಡಿದು ಎರಡು ವರ್ಷದ ಮಗು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement