ಅಪ್ರಾಪ್ತ ಪತ್ನಿ ಮೇಲೆ, ಪತಿ-ಸ್ನೇಹಿತರಿಂದ ಗ್ಯಾಂಗ್‌ ರೇಪ್

ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಕುರಿತು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾದ ಬಗ್ಗೆ ವರದಿಯಾಗಿದೆ.
ವರ್ಷದ ಹಿಂದೆ ಬಾಲಕಿಯನ್ನು ಬೆದರಿಸಿ ಬಲವಂತವಾಗಿ ಮದುವೆಯಾಗಿದ್ದ ಯುವಕ ಹಾಗೂ ಮೂವರು ಸ್ನೇಹಿತರು ಜೂನ್ 7ರಂದು ನಗರದ ಹೊರವಲಯಕ್ಕೆ ಬಾಲಕಿಯನ್ನು ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು. ನಂತರ ಈ ಕೃತ್ಯದ ಬಗ್ಗೆ ದೂರು ನೀಡದಂತೆ ಬಾಲಕಿಗೆ ಕೊಲೆ ಬೆದರಿಕೆ ಹಾಕಿ, ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ.
ವರ್ಷದ ಹಿಂದೆ ತನ್ನನು ಬೆದರಿಸಿ ಮದುವೆಯಾಗಿದ್ದ ವ್ಯಕ್ತಿ ,ಮದುವೆಯ ಬಳಿಕ ಶೀಲ ಶಂಕಿಸಿ ಆಗಾಗ ಗಲಾಟೆ ಮಾಡುತ್ತಿದ್ದ. ಜೂನ್‌ 7ರಂದು ಕರೆ ಮಾಡಿದ್ದ ಪತಿ ನಿರ್ದಿಷ್ಟ ಸ್ಥಳಕ್ಕೆ ಬರುವಂತೆ ಸೂಚಿಸಿದ್ದು, ನಂತರ ನಿರ್ಜನ ಪ್ರದೇಶದ ನಿರ್ಮಾಣ ಹಂತದ ಕಟ್ಟಡಕ್ಕೆ ಎಳೆದೊಯ್ದು ಪತಿ ಹಾಗೂ ಮೂವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ, ವಿರೋಧಿಸಿದ್ದಕ್ಕೆ ತಲೆಗೆ ಹೊಡೆದಿದ್ದಾರೆ, ಆಗ ತನಗೆ ಪ್ರಜ್ಞೆ ತಪ್ಪಿದೆ ಎಂದು ಅಪ್ರಾಪ್ತೆ ಆರೋಪಿಸಿದ್ದಾಳೆ.ಈ ಕುರಿತು ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement