ಎಲ್ಲೆಂದರಲ್ಲಿ ವಾಹನ ತಡೆಯುವ ಹಾಗಿಲ್ಲ, ಪೊಲೀಸರಿಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಸೂಚನೆ: ಎಎಸ್​ಐ-ಮುಖ್ಯಪೇದೆ ಅಮಾನತು

posted in: ರಾಜ್ಯ | 0

ಬೆಂಗಳೂರು : ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗಾಗಿ ಇನ್ಮುಂದೆ ಟ್ರಾಫಿಕ್ ಪೊಲೀಸರು ವಾಹನಗಳನ್ನು ನಿಲ್ಲಿಸುವಂತಿಲ್ಲ. ಕೇವಲ ಟ್ರಾಫಿಕ್ ರೂಲ್ಸ್‌ ಅನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ ಖುದ್ದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಗರದಲ್ಲಿ ಅನಗತ್ಯವಾಗಿ ವಾಹನಗಳ ತಡೆದು ಪರಿಶೀಲನೆ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ರಸ್ತೆಯಲ್ಲಿ ಬರುವ ವಾಹನಗಳನ್ನು ಅನಗತ್ಯವಾಗಿ ತಡೆದು ಪರಿಶೀಲನೆ ಮಾಡುವಂತಿಲ್ಲ. ಡ್ರಿಂಕ್ ಅಂಡ್‌ ಡ್ರೈವ್ ಮಾಡುವ ವಾಹನಗಳಿಗೆ ಮಾತ್ರ ತಪಾಸಣೆ ನಡೆಸಬೇಕು. ಕಣ್ಣಿಗೆ ಕಾಣುವ ರೂಲ್ಸ್ ಬ್ರೇಕ್ ಮಾಡುವಂತಹ ವಾಹನಗಳನ್ನು ತಡೆದು ಪರಶೀಲಿಸಿ ಎಂದು ನಗರದ ಪೊಲೀಸ್ ಕಮೀಷನರ್ ಹಾಗೂ ಟ್ರಾಫಿಕ್ ಜಂಟಿ ಆಯುಕ್ತರನ್ನು ಟ್ಯಾಗ್ ಮಾಡಿ ಡಿಜಿಪಿ ಪ್ರವೀಣ್‌ ಸೂದ್‌ ಟ್ವೀಟ್ ಮಾಡಿದ್ದಾರೆ.

advertisement

ಇದೇವೇಳೆ ಬೆಂಗಳೂರು ನಗರ ಸಂಚಾರ ಜಂಟಿ ಪೊಲೀಸ್‌ ಆಯುಕ್ತ ರವಿಕಾಂತೇ ಗೌಡ ಟ್ವೀಟ್‌ ಮಾಡಿ, ದಾಖಲೆ ಪರಿಶೀಲನೆ ನೆಪದಲ್ಲಿ ಕಾರು ಮಾಲೀಕರೊಬ್ಬರಿಂದ ಹಣ ವಸೂಲಿ ಆರೋಪದಡಿ ಹಲಸೂರು ಗೇಟ್​ ಪೊಲೀಸ್​ ಠಾಣೆಯ ಎಎಸ್​ಐ ಮತ್ತು ಮುಖ್ಯಪೇದೆಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ದಂಡ ಸಂಗ್ರಹ ಮಾಡುವ ಪರಿಣಾಮದಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ನಿಯಮ ಉಲ್ಲಂಘನೆ ಮಾಡದಿದ್ದರೂ ಎಲ್ಲೆಂದರಲ್ಲಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಾರೆ ಎಂದು ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದಿತ್ತು.

ಓದಿರಿ :-   ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಆದರೂ ಬಹುತೇಕ ಸಂಚಾರ ಪೊಲೀಸರು, ದಾಖಲೆಗಳ ಪರಿಶೀಲನೆ ನೆಪದಲ್ಲಿ ಸಿಕ್ಕ ಸಿಕ್ಕ ವಾಹನಗಳನ್ನು ತಡೆಯುವುದು ಜನರ ಅಸಮಾಧಾನಕ್ಕೆ ಕಾರಣವಾಗಿತ್ತು. ಸಾರ್ವಜನಿಕರು ಟ್ವೀಟ್ ಮೂಲಕ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದರು. ಹೀಗಾಗಿ ಟ್ವೀಟ್ ಮೂಲಕ ಎಲ್ಲೆಂದರಲ್ಲಿ ದಾಖಲೆಯ ಪರಿಶೀಲನೆ ನೆಪದಲ್ಲಿ ವಾಹನಗಳನ್ನು ತಡೆದು ನಿಲ್ಲಿಸುವಂತಿಲ್ಲ. ಈ ಬಗ್ಗೆ ಬೆಂಗಳೂರು ನಗರ ಕಮೀಷನರ್‌ಗೆ ಹಾಗೂ ಟ್ರಾಫಿಕ್ ಪೊಲೀಸರಿಗೆ ತಕ್ಷಣ ಜಾರಿಗೊಳಿಸುವಂತೆ ಸೂಚನೆ ಕೊಡುತ್ತೇನೆ ಎಂದು ಪ್ರವೀಣ್ ಸೂದ್ ಟ್ವೀಟ್‌ ಮಾಡಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ನ್ಯಾ. ಸುಭಾಷ್ ಆಡಿ ನೇತೃತ್ವದ ಸಮಿತಿ ಕಾರ್ಯಾಚರಣೆಗೆ ಹೈಕೋರ್ಟ್‌ ತಡೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement