ಬೆಳಗಾವಿ : ಸ್ಮಶಾನಕ್ಕೆ ಹೋಗಲು ದಾರಿ ಮಾಡಿಕೊಡುವಂತೆ ಒತ್ತಾಯಿಸಿ ಶವ ತಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರಿಗೆ ಸ್ಮಶಾನಕ್ಕೆ ಹೋಗಲು ದಾರಿಯಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ಶವದೊಂದಿಗೆ ಆಗಮಿಸಿ ಪ್ರತಿಭಟಿಸಿದರು. ಹಾಗೂ ತಕ್ಷಣವೇ ದಾರಿ ಮಾಡಿಕೊಡುವಂತೆ ಮನವಿ ಮಾಡಿದರು.ಪೊಲೀಸರ ಮನವೊಲಿಸಲು ಪ್ರಯತ್ನಿಸಿದರು. ಆದರೆ, ನಾಗರಿಕರು ತಮ್ಮ ಪ್ರತಿಭಟನೆ ನಿಲ್ಲಿಸಲಿಲ್ಲ. ಕೊನೆಗೂ ಜಿಲ್ಲಾಧಿಕಾರಿಗಳ ಸ್ಮಶಾನಕ್ಕೆ ಹೋಗಲು ದಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ ನಂತರ ನಾಗರಿಕರು ಪ್ರತಿಭಟನೆ ಹಿಂಪಡೆದುಕೊಂಡರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement
ನಿಮ್ಮ ಕಾಮೆಂಟ್ ಬರೆಯಿರಿ