ರಾಜ್ಯದ ಹಲವೆಡೆ ಜುಲೈ 1ರ ವರೆಗೆ ಭಾರೀ ಮಳೆ: ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌

ಬೆಂಗಳೂರು : ಜೂನ್‌ 29ರಿಂದ ಜುಲೈ 1ರ ವರೆಗೆ ಕರಾವಳಿ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಜಿಲ್ಲೆಗಳಿಗೆ ಜೂನ್‌ 30ರಿಂದ ಜುಲೈ 1ರ ವರೆಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ.
ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ರಾಜ್ಯದ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement