ಸಹಾಯಧನ ನೀಡುವ ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ ಪ್ರಕಟ: ಸರ್ಕಾರದ ಆದೇಶ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ( Kashi Yatra ) ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರ ಅಂತಿಮ ಆದೇಶ ಹೊರಡಿಸಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಸೋಮವಾರ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿಗಳಂತೆ ಸಹಾಯಧನ ನೀಡುವ ಯೋಜನೆಗೆ ಮಾರ್ಗಸೂಚಿಗಳನ್ನು ಸೋಮವಾರ ಅಂತಿಮಗೊಳಿಸಿದ್ದು, ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್‌ 1, 2022 ಕ್ಕೆ ಪೂರ್ವಾನ್ವಯವಾಗುವಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ಸೂಕ್ತ ದಾಖಲಾತಿಗಳೊಂದಿಗೆ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಚಿವರು ತಿಳಿಸಿದ್ದಾರೆ.

ಮಾರ್ಗಸೂಚಿಯ ಅಂಶಗಳು

* ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ 5,೦೦೦ ರೂ.ಗಳನ್ನು ಸಹಾಯ ಧನವಾಗಿ ನೀಡಲಾಗುವುದು.
* ಕರ್ನಾಟಕದ ಕಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈ ಉದ್ದೇಶಕ್ಕಾಗಿ ಕೆಳಕಂಡ ಯಾವುದಾದರೂ ಒಂದು ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕು-ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನೀಡಿರುವ “ಗುರುತಿನ ಚೀಟಿ’ ಅಥವಾ ಆಧಾರ್‌ ಗುರುತಿನ ಚೀಟಿ ಅಥವಾರೇಷನ್ ಕಾರ್ಡ್

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

* ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್‌ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರಬೇಕು, 18 ವರ್ಷ ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

* 01-04-2022 ರಿಂದ 30-06-2022ರವರೆಗೆ ಕಾಶಿ ಶ್ರೀ ವಿಶ್ವನಾಥ ಸ್ವಾಮಿ ದರ್ಶನಕ್ಕೆ ತೆರಳಿದ ಯಾತ್ರಾರ್ಥಿಗಳು ಸಂಬಂಧಿಸಿದ ದಾಖಲಾತಿ (ಕಾಶಿ ಶ್ರೀ ವಿಶ್ವನಾಥ ಸ್ವಾಮಿ ದೇವಾಲಯಕ್ಕೆ ತೆರಳಲು ಮುಂಗಡವಾಗಿ ಕಾಯ್ದಿರಿಸಿದ ಮತ್ತು ಹಿಂದಿರುಗಿದ ಬಗ್ಗೆ ಕಾಯ್ದಿರಿಸಿದ ಟಿಕೆಟ್, ಛಾಯಾಚಿತ್ರ ಪೂಜಾ ರಶೀದಿ, ಅಥವಾ ದೇವಾಲಯಕ್ಕೆ ತೆರಳಿ ಮರಳಿದ ಬಗ್ಗೆ ಯಾವುದಾದರೂ ಇತರೆ ದಾಖಲೆ)ಗಳನ್ನು ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಕಚೇರಿಗೆ ಸಲ್ಲಿಸಬೇಕು

* 01-07-2022ರಿಂದ ಅನ್ವಯವಾಗುವಂತೆ ಯಾತ್ರಾರ್ಥಿಗಳು ಕಾಶಿ ಯಾತ್ರೆ ಕೈಗೊಂಡಿರುವ ಬಗ್ಗೆ ಸಂಬಂಧಿಸಿದ ದಾಖಲೆಗಳನ್ನು ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ಕಚೇರಿಯಿಂದ ಬಯೋಮೆಟ್ರಿಕ್‌ ದೃಢೀಕರಣದೊಂದಿಗೆ, ಆನ್‌ಲೈನ್‌ ಅಥವಾ ಮುದ್ದಾಂ/ನೊಂದಾಯಿತ ಅಂಚೆ ಮೂಲಕ, ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಇವರ ಕಚೇರಿಗೆ ಸಲ್ಲಿಸಬೇಕು. ಒಂದು ವೇಳೆ ವಾರಾಣಸಿಯ ಕರ್ನಾಟಕ ರಾಜ್ಯ ಛತ್ರ ವ್ಯವಸ್ಥಾಪಕರ ದೃಢೀಕರಣ ಇಲ್ಲದಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

* ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ, ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸುವುದಿಲ್ಲ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

* ಸರ್ಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳ ಬ್ಯಾಂಕ್‌ ಖಾತೆಯು ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಾಗಿರಬೇಕು ಮತ್ತು ಕಡ್ಡಾಯವಾಗಿ ಆಧಾರ್ ಲಿಂಕ್‌ ಆಗಿರಬೇಕು

* ಈ ಸಹಾಯಧನವನ್ನು ಯಾತ್ರೆಯನ್ನು ಪೂರ್ಣಗೊಳಿಸಿ ಸಂಬಂಧಿಸಿದ ದಾಖಲೆಗಳನ್ನು ನಿಗದಿತ ನಮೂನೆ ಅರ್ಜಿಯನ್ನು ಭರ್ತಿ ಮಾಡಿ ನೀಡಿದ ನಂತರ ಸದರಿ ಅರ್ಜಿಗಳನ್ನು ಧಾರ್ಮಿಕ ದತ್ತಿ ಆಯುಕ್ತರು ಸ್ವೀಕರಿಸಿ, ಪರಿಶಿಲಿಸಿ ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದು.

30 ಸಾವಿರ ಜನರಿಗೆ ತಲಾ 5 ಸಾವಿರದಂತೆ ಸಹಾಯಧನ ನೀಡುವ ಯೋಜನೆ ಅಲ್ಲದೆ, ಮತ್ತೊಂದು ವಿಶೇಷ ಯೋಜನೆಯನ್ನು ಮುಜರಾಯಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ.
ಕೇಂದ್ರ ಸರಕಾರದ “ಭಾರತ ಗೌರವ” ಯೋಜನೆಯ ಅಡಿಯಲ್ಲಿ ಮುಜರಾಯಿ ಇಲಾಖೆಯ ರೈಲ್ವೇ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಾಶಿಗೆ ವಿಶೇಷ ರೈಲಿನ ಕಾರ್ಯಾಚರಣೆ ಸದ್ಯದಲ್ಲೇ ಪ್ರಾರಂಭಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ರೈಲ್ವೇ ಇಲಾಖೆಯಲ್ಲಿ ನೊಂದಣಿ ಮಾಡಿಸಿದ್ದು ಇನ್ನು ಕೆಲವೇ ತಿಂಗಳುಗಳಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ ಎಂದು ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement