ಕಾಶ್ಮೀರ: ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತ

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ನೌಪೋರಾ-ಖಾರ್ಪೋರಾ ಟ್ರುಬ್ಜಿ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಸೋಮವಾರ (ಜೂನ್ 27) ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ. ಇಂದು, ಸೋಮವಾರ ಮುಂಜಾನೆ ಎನ್‌ಕೌಂಟರ್ ಆರಂಭವಾಗಿದ್ದು, ಇಲ್ಲಿಯವರೆಗೆ ಇಬ್ಬರು ಉಗ್ರರ ಶವಗಳನ್ನು ಎನ್‌ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಟ್ರುಬ್ಜಿ ಪ್ರದೇಶದ ನೌಪೋರಾ-ಖೇರ್ಪೋರಾದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರ ಪತ್ತೆ ಇನ್ನೂ ಆಗಬೇಕಿದೆ. ಈ ಪ್ರದೇಶದಲ್ಲಿ ಇನ್ನಷ್ಟು ಉಗ್ರರು ಅಡಗಿ ಕುಳಿತಿರುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆಗಳು ಭಾವಿಸಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್‌ಪಿಎಫ್ ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯನ್ನು ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಸುಳಿವು ಸಿಕ್ಕಿದ ನಂತರ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಪರಿಣಾಮವಾಗಿ ಎನ್‌ಕೌಂಟರ್‌ ನಡೆಯಿತು.
ಏತನ್ಮಧ್ಯೆ, ಈ ವರ್ಷ ಕಾಶ್ಮೀರ ಕಣಿವೆಯಲ್ಲಿ 70 ಕ್ಕೂ ಹೆಚ್ಚು ಎನ್‌ಕೌಂಟರ್‌ಗಳು ನಡೆದಿದ್ದು, ಇದರ ಪರಿಣಾಮವಾಗಿ 120 ಭಯೋತ್ಪಾದಕರು ಸತ್ತಿದ್ದಾರೆ. ಹತರಾದ 120 ಭಯೋತ್ಪಾದಕರ ಪೈಕಿ 33 ಮಂದಿ ವಿದೇಶಿಗ ಭಯೋತ್ಪಾದಕರು, ಹೆಚ್ಚಾಗಿ ಪಾಕಿಸ್ತಾನಿಗಳು, 16 ಭದ್ರತಾ ಸಿಬ್ಬಂದಿ ಮತ್ತು 19 ನಾಗರಿಕರು ವಿವಿಧ ಭಯೋತ್ಪಾದನೆ ಸಂಬಂಧಿತ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು 46 ಸಕ್ರಿಯ ಭಯೋತ್ಪಾದಕರನ್ನು ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement