ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಜುಲೈ 15ರ ವರೆಗೆ ಗಡುವು

ಹುಬ್ಬಳ್ಳಿ: ರಾಜ್ಯ ಸರ್ಕಾರ 1995-2000ದ ಅವಧಿಯಲ್ಲಿ ಆರಂಭಗೊಂಡ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಕಾಲ್ಪನಿಕ ವೇತನ ಜಾರಿಗೊಳಿಸಬೇಕು ಹಾಗೂ ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಹಿಂದಿನ ಪದ್ಧತಿಯನ್ನೇ ಅನುಸರಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಜುಲೈ 15ರೊಳಗೆ ಈಡೇರಿಸಬೇಕು. ಇಲ್ಲದಿದ್ದರೆ, ಶಿಕ್ಷಕರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸಬೇಕು ಎಂಬ ನಿರ್ಣಯವನ್ನು ಭಾನುವಾರ ಹುಬ್ಬಳ್ಳಿಯಲ್ಲಿನಡೆದ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಕೇಂದ್ರ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಯಿತು.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಈ ನಿರ್ಣಯ ಮಂಡಿಸಿದರು.
ಈ ಸಂದರ್ಭದಲ್ಲಿ ಮಅತನಾಡಿದ ಬಸವರಾಜ ಹೊರಟ್ಟಿ, ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದಾಗಿ ಹೇಳಿದ್ದ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತ ಬಂದಿದೆ. ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣದ ಹೆಸರಿನಲ್ಲಿ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ ಬರುತ್ತಿದೆ. ಹೀಗಾಗಿ ಹಳೆಯ ಪದ್ಧತಿ ಮುಂದುವರಿಸಬೇಕು. 2006ರಿಂದ ನೇಮಕವಾದ ಶಿಕ್ಷಕರಿಗೆ ಹಳೇ ಪಿಂಚಣಿ ಪದ್ಧತಿಯನ್ನೇ ಮುಂದುವರಿಸಬೇಕು. ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಲಾಗುವುದು ಎಂದರು.‌

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement