ಮೈಸೂರು : ಗೃಹಿಣಿಯೊಬ್ಬರು ತಮ್ಮಿಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಟಿತಾಲ್ಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರೋಜ(32) ತನ್ನ ಮಕ್ಕಳಾದ ಗೀತ(6), ಕುಸುಮ(4) ಅವರ ಜೊತೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
advertisement
ಟಿ.ನರಸೀಪುರ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ಲಿಂಗರಾಜು ಎಂಬುವರನ್ನು ಸರೋಜ ವಿವಾಹವಾಗಿದ್ದರು. ಕೌಟುಂಬಿಕ ಕಲಹದಿಂದಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ರಾಮಗೌಡನಪುರಕ್ಕೆ ಸರೋಜ ಬಂದಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಕ್ಕಳಿಗೆ ನೇಣು ಬಿಗಿದು ತಾನು ನೇಣಿಗೆ ಶರಣಾಗಿದ್ದಾರೆ.
ಸದ್ಯ ಮೃತದೇಹಗಳನ್ನು ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ